Advertisement

ಕೌಟುಂಬಿಕ ಕಲಹ: ಆತ್ಮಹತ್ಯೆಗೆ ಯತ್ನ

03:09 PM Feb 27, 2022 | Team Udayavani |

ಬೀದರ: ಕೌಟುಂಬಿಕ ಕಲಹದಿಂದ ಮನನೊಂದು ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ಮೈಮೇಲೆ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಶನಿವಾರ ನಡೆದಿದೆ.

Advertisement

ವಲ್ಲೇಪುರ ಗ್ರಾಮದ ಪ್ರಕಾಶ ಕಾಶಿನಾಥ (40) ಎಂಬುವನೇ ಆತ್ಮಹತ್ಯೆಗೆ ಯತ್ನಿಸಿರುವ ವ್ಯಕ್ತಿ.

ಅಂಬೇಡ್ಕರ್‌ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ ನಡೆಯುವ ಸಂದರ್ಭದಲ್ಲಿ ಪೊಲೀಸ್‌ ಅಧಿಕಾರಿಗಳ ಸಮ್ಮುಖದಲ್ಲೇ ಬಾಟಲಿಯಲ್ಲಿ ಪೆಟ್ರೋಲ್‌ ತಂದಿದ್ದ ಪ್ರಕಾಶ ಏಕಾಏಕಿ ಮೈಮೇಲೆ ಸುರಿದುಕೊಂಡು, ನಾನು ಸಾಯಬೇಕು ಎಂದು ಕಿರುಚಾಡಿದ್ದಾನೆ. ಕೂಡಲೇ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರು ಆತನನ್ನು ತಡೆದಿದ್ದಾರೆ. ಕುಡಿದ ಅಮಲಿನಲ್ಲಿದ್ದ ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next