ಮಂಗಳೂರು : ತುಳು ಚಿತ್ರರಂಗ, ರಂಗಭೂಮಿಯ ಪ್ರಖ್ಯಾತ ನಟ ಅರವಿಂದ ಬೋಳಾರ್ ಅವರು ಸೋಮವಾರ ಸಂಜೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನಗರದ ಪಂಪ್ ವೆಲ್ ಬಳಿ ಅವರು ಚಲಾಯಿಸುತ್ತಿದ್ದ ಸ್ಕೂಟರ್ ಸ್ಕಿಡ್ ಆಗಿ ಗಾಯಗೊಂಡಿದ್ದು, ಅವರನ್ನು ತತ್ ಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೋಳಾರ್ ಅವರ ಕಾಲಿಗೆ ಗಾಯವಾಗಿದ್ದು, ನಾಳೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. ಯಾವುದೇ ರೀತಿಯಲ್ಲಿ ಗಾಬರಿ ಪಡಬೇಕಾಗಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ಖುದ್ದು ಬೋಳಾರ್ ಅವರು ಕೂಡ ಉದಯವಾಣಿ ಜತೆ ಮಾತನಾಡಿದರು.
ಕಾಲಿಗೆ ಗಾಯವಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ ನಟ, ನಿರ್ದೇಶಕ ದೇವದಾಸ್ ಕಾಪಿಕಾಡ್ ತಿಳಿಸಿದ್ದಾರೆ.