Advertisement

ಕರಾವಳಿಯ ಪುಣ್ಯಕ್ಷೇತ್ರಗಳಿಗೆ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಭೇಟಿ

11:40 PM Jan 17, 2024 | Team Udayavani |

ಕೊಲ್ಲೂರು/ಬೆಳ್ತಂಗಡಿ/ಸುಬ್ರಹ್ಮಣ್ಯ,: ಭಾರತ ಕ್ರಿಕೆಟ್‌ ತಂಡದ ಖ್ಯಾತ ಆಟಗಾರ ಮಂಗಳೂರು ಮೂಲದ ಕೆ.ಎಲ್‌. ರಾಹುಲ್‌ ಕರಾವಳಿಯ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡಿದರು.

Advertisement

ಮಂಗಳವಾರ ಕೊಲ್ಲೂರು ಶ್ರೀ ಮೂಖಾಂಬಿಕಾ ದೇಗುಲಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ ಕುಮಾರ್‌ ಶೆಟ್ಟಿ, ಪಿಆರ್‌ಒ ಜಯಕುಮಾರ್‌, ಕ್ಷೇತ್ರದ ಪುರೋಹಿತ ಸುರೇಶ ಭಟ್‌ ಸ್ವಾಗತಿಸಿದರು.

ಬುಧವಾರ ಧರ್ಮಸ್ಥಳಕ್ಕೆ ಭೇಟಿ ದೇವರ ದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಪಡೆದರು. ಡಿ. ಹರ್ಷೇಂದ್ರ ಕುಮಾರ್‌ ಉಪಸ್ಥಿತರಿದ್ದರು.

ಬಯಲು ಆಲಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀನಿವಾಸ ಹಾಗೂ ಅರ್ಚಕರು ಕ್ಷೇತ್ರದ ವತಿಯಿಂದ ಗೌರವಿಸಿದರು.

Advertisement

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಬುಧವಾರ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ದೇವರು, ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ರಾಹುಲ್‌ ಅವರನ್ನು ಗೌರವಿಸಲಾಯಿತು.

ಕುಡ್ಲಕ್ಕೆ ನಾನೆಂದೂ ಕೃತಜ್ಞ: ರಾಹುಲ್‌
ದಕ್ಷಿಣ ಕನ್ನಡದ ದೇವಸ್ಥಾನಗಳಿಗೆ ಭೇಟಿ ನೀಡಿದ ಬೆನ್ನಲ್ಲೇ ಕ್ರಿಕೆಟಿಗ ಕೆ.ಎಲ್‌. ರಾಹುಲ್‌ ಅವರು “ನಮ್ಮ ಕುಡ್ಲಕ್ಕೆ ನಾನೆಂದೂ ಕೃತಜ್ಞ’ ಎಂದು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದಾರೆ.

ರಾಹುಲ್‌ ವಿವಿಧ ದೇವಾಲಯಗಳಿಗೆ ಭೇಟಿ ನೀಡಿದ ಸಂದರ್ಭವನ್ನು ಫೋಟೋ ಸಮೇತ ತಮ್ಮ ಎಕ್ಸ್‌ ಖಾತೆಯಲ್ಲಿ ಹಾಕಿ ಮಂಗಳೂರಿನ ಬಗ್ಗೆ ಕೃತಜ್ಞತೆಯ ಮಾತು ಬರೆದುಕೊಂಡಿದ್ದಾರೆ. ಅವರು ಸಾಮಾನ್ಯರಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರದ ಫೋಟೋ ಕ್ಲಿಕ್ಕಿಸುವ ವೀಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದೆ.
ರಾಹುಲ್‌ ಅವರು ತನ್ನ ಬಾಲ್ಯವನ್ನು ಮಂಗಳೂರಿನಲ್ಲಿ ಕಳೆದಿದ್ದದ್ದು, ನೆಹರೂ ಮೈದಾನದಲ್ಲಿ ಕ್ರಿಕೆಟ್‌ ಅಭ್ಯಾಸ ಮಾಡುತ್ತಿದ್ದರು. ಅವರ ತಂದೆ ಲೋಕೇಶ್‌ ಅವರು ಎನ್‌ಐಟಕೆಯಲ್ಲಿ ಪ್ರೊಫೇಸರ್‌ ಮತ್ತು ತಾಯಿ ರಾಜೇಶ್ವರಿ ಅವರು ಮಂಗಳೂರು ವಿವಿ ಕಾಲೇಜಿನಲ್ಲಿ ಅದ್ಯಾಪಕಿಯಾಗಿದ್ದರು. ಇದೇ ಕಾರಣಕ್ಕೆ ರಾಹುಲ್‌ ಅವರಿಗೆ ಮಂಗಳೂರಿನ ಬಗ್ಗೆ ವಿಶೇಷ ಗೌರವವಿದೆ.

Advertisement

Udayavani is now on Telegram. Click here to join our channel and stay updated with the latest news.

Next