Advertisement
ಶ್ವಾಸಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ 9.45 ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಪಂಚನಹಳ್ಳಿ ಮೂಲದವರಾಗಿದ್ದರು. ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
Related Articles
Advertisement
”ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ” ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಮಾಡಿದ್ದಾರೆ. ವಿಜಯೇಂದ್ರ ಸಂತಾಪ
‘ಕನ್ನಡ ಕಿರುತೆರೆಯ ಖ್ಯಾತ ನಿರೂಪಕಿ ಹಾಗೂ ಕಲಾವಿದೆ ಅಪರ್ಣಾ ಅವರು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿ ಕೂಡ ಗುರುತಿಸಿಕೊಂಡು, ಕಿರುತೆರೆಯಲ್ಲಿ ಮೂಡಿಬಂದ ‘ಮೂಡಲಮನೆ’, ‘ಮುಕ್ತ’ ಮುಂತಾದ ಧಾರಾವಾಹಿಗಳಲ್ಲಿ ನಟಿಸಿ ಮನೆಮಾತಾಗಿದ್ದ ಕಲಾವಿದೆ ಅಪರ್ಣಾ ಅವರು ಬಹುಬೇಗ ಇಹಲೋಕ ತ್ಯಜಿಸಿರುವುದು ನೋವಿನ ಸಂಗತಿ.
ಮೃತ ಅರ್ಪಣಾ ಅವರ ಕುಟುಂಬ ವರ್ಗದವರಿಗೆ ಭಗವಂತನು ಅಗಲಿಕೆಯ ನೋವು ಸಹಿಸುವ ಶಕ್ತಿ ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಕ್ಸ್ ಪೋಸ್ಟ್ ಮಾಡಿದ್ದಾರೆ.