Advertisement
ತಾಲೂಕಿನ ಕೈಲಾಂಚ ಹೋಬಳಿ ಕೃಷ್ಣಾಪುರ ದೊಡ್ಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ನಮ್ಮೂರ ಶಾಲೆ-ನಮ್ಮ ಶಕ್ತಿ ಎಂಬ ಧ್ಯೕಯ ವಾಕ್ಯದಡಿ ಶಾಂತಲಾ ಚಾರಿಟಬಲ್ ಟ್ರಸ್ಟ್ ಅಧಿಕೃತವಾಗಿ ದತ್ತು ಸ್ವೀಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಖಾಸಗಿ ಸಂಸ್ಥೆಗಳು ವ್ಯಾಪಾರಿ ಸಂಸ್ಥೆಗಳಂತೆ ವರ್ತಿಸುತ್ತಿವೆ. ಪೋಷಕರ ಅರಿವಿಗೆ ಬಾರದಂತೆ ರಕ್ತ ಹೀರಿಬಿಡುತ್ತಿವೆ. ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಹಿಂದೆ ಬಿದ್ದಿಲ್ಲ. ಮೇಲಾಗಿ ಸರ್ಕಾರ ಈ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನೇಕ ದಾನಿಗಳು ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಪೋಷಕರು ಯಾವ ಆತಂಕವೂ ಇಲ್ಲದೆ, ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ದಾಖಲಿಸಬೇಕು ಎಂದು ತಿಳಿಸಿದರು.
Related Articles
Advertisement
ಪ್ಲಾಸ್ಟಿಕ್‌ನಿಂದ ಪರಿಸರಕ್ಕೆ ತೊಂದರೆ: ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಲೆಗಳಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ಪ್ಲಾಸ್ಟಿಕ್ ವಸ್ತುಗಳಿಂದ ಪರಿಸರದಲ್ಲಾಗುತ್ತಿರುವ ತೊಂದರೆಯ ಬಗ್ಗೆ ಶಿಕ್ಷಕರು ಮತ್ತು ಪೋಷಕರು ಮಕ್ಕಳಿಗೆ ವಿವರವಾಗಿ ತಿಳಿಸಿ ಕೊಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರಾದ ಬಿ.ಆರ್. ಜ್ಞಾನವಿ ರಾಜ್, ಆರ್.ನಿತ್ಯಶ್ರೀ ಭರತ ನಾಟ್ಯ ಪ್ರದರ್ಶನ ಮಾಡಿದರು. ಗಾಯಕರಾದ ಹೊನ್ನಿಗಾನಹಳ್ಳಿ ಸಿದ್ದರಾಜು, ರಘು ಮತ್ತು ತಂಡದವರು ಗೀತ ಗಾಯನ ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪರಿಕರಗಳನ್ನು ವಿತರಿಸಲಾಯಿತು.
ಶಿಕ್ಷಣ ತಜ್ಞ ಎಲ್. ನರಸಿಂಹಯ್ಯ ಸಂಸ್ಕೃತಿ ರಂಗ ಮಂದಿರವನ್ನು ಉದ್ಘಾಟಿಸಿದರು. ಜಿಲ್ಲಾ ಪಂಚಾಯ್ತಿ ಸದಸ್ಯ ಎಚ್.ಕೆ. ನಾಗರಾಜು, ಶಿಕ್ಷಣ ಇಲಾಖೆಯ ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಸ್. ಸಂಪತ್ ಕುಮಾರ್, ಶಿಕ್ಷಣ ಸಂಯೋಜಕ ಗೋವಿಂದ ಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸಿಂ.ಲಿಂ. ನಾಗರಾಜ್, ರೈತಪರ ಹೋರಾಟಗಾರ್ತಿ ಅನಸೂಯಮ್ಮ, ಬರಹಗಾರ ತ್ಯಾಗರಾಜ, ಶಾಂತಲಾ ಚಾರಿಟಬಲ್ ಟ್ರಸ್ಟಿನ ಅಧ್ಯಕ್ಷ ಶಿವಾಜಿ ರಾವ್, ನಾಗೇಂದ್ರ ರಾವ್, ದತ್ತು ಶಾಲೆಯ ಸಂಯೋಜಕಿ ಚಿತ್ರಾ ರಾವ್, ಶಾಲೆಯ ಮುಖ್ಯಶಿಕ್ಷಕಿ ನಾಗರತ್ನಮ್ಮ, ಎಸ್‌ಡಿಎಂಸಿ ಸಮನ್ವಯ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಗೋಪಾಲ್, ಲಂಚ ಮುಕ್ತ ಕರ್ನಾಟಕ ವೇದಿಕೆಯ ಸಂಚಾಲಕ ಅರುಣ್ ಕುಮಾರ್ ಮುಂತಾದವರು ಉಪಸ್ಥಿತರಿದ್ದರು.