Advertisement
ಪ್ರಸಕ್ತ ವರ್ಷ ಮುಂಗಾರು ಹಂಗಾಮು ಸಕಾಲದಲ್ಲಿ ಆರಂಭಗೊಳ್ಳುವ ನಿರೀಕ್ಷೆಯಿದೆ. ಅದಕ್ಕಾಗಿ ರೈತರು ಈಗಿನಿಂದಲೇ ಅಗತ್ಯ ಪೂರ್ವಸಿದ್ಧತೆಯಲ್ಲಿ ತೊಡಗಿದ್ದಾರೆ. ಎತ್ತುಗಳು, ಟ್ರ್ಯಾಕ್ಟರ್ ಇತ್ಯಾದಿ ಖರೀದಿಯಲ್ಲಿ ತೊಡಗಿದ್ದಾರೆ. ಅದೇ ರೀತಿ, ಇನ್ನು ಎರಡು ವಾರಗಳಲ್ಲಿ ಮುಂಗಾರು ಹಂಗಾಮು ಆರಂಭಗೊಳ್ಳಲಿದ್ದು, ಅಷ್ಟರೊಳಗಾಗಿ ಕೃಷಿ ಜಮೀನು ಹದಗೊಳಿಸುವ ಕಾರ್ಯವನ್ನು ರೈತರು ಮಾಡುತ್ತಿದ್ದಾರೆ. ಭೂಮಿ ತಂಪಾಗುವಷ್ಟು ಮಳೆ ಬಂದರೆ ಜಿಲ್ಲೆಯ ರೈತರು ಬಿತ್ತನೆ ಆರಂಭಿಸುತ್ತಾರೆ. ಕಳೆದ ವರ್ಷ ಮುಂಗಾರು ಪೂರ್ವದಲ್ಲಿ ಮಳೆ ಬಿದ್ದಾಗಲೇ ಬಿತ್ತನೆ ಮಾಡಿ ನಂತರ ಮಳೆ ಕೈಕೊಟ್ಟಿದ್ದರಿಂದ
ಹಾಗೂ ಇತರೆ 10,052 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಲಾಗಿದೆ. ಇದಕ್ಕಾಗಿ ಅಗತ್ಯ ಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗುತ್ತಿದೆ. ಸದ್ಯಕ್ಕೆ 12845 ಟನ್ ಯೂರಿಯಾ, 115 ಟನ್ ಎಂಒಪಿ, 7625 ಟನ್ ಕಾಂಪ್ಲೆಕ್ಸ್, 354 ಟನ್ ಎಸ್‌ಎಸ್‌ಪಿ ಸೇರಿದಂತೆ ಒಟ್ಟು 25698 ಮೆ. ಟನ್ ರಸಗೊಬ್ಬರ ದಾಸ್ತಾನು ಮಾಡಲಾಗಿದೆ. ರೈತರ ಬೇಡಿಕೆಗೆ ತಕ್ಕಂತೆ ಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಮಾಡಿಕೊಂಡಿದೆ.
Related Articles
Advertisement
ಆತುರದ ನಿರ್ಧಾರ ಬೇಡಜಿಲ್ಲೆಯಲ್ಲಿ ಮುಂಗಾರು ಪೂರ್ವದಲ್ಲಿ ಸಾಧಾರಣ ಮಳೆಯಾಗುತ್ತಿದ್ದಂತೆ ಸೋಯಾಬಿನ್ ಬಿತ್ತನೆಗೆ ರೈತರು ಮುಂದಾಗುತ್ತಿದ್ದಾರೆ. ಆದರೆ, ಈ ರೀತಿ ಆತುರ ಮಾಡದೇ ಮಳೆ ನೋಡಿಕೊಂಡು ಬಿತ್ತನೆ ಮಾಡಬೇಕಿದೆ. ಒಂದು ವೇಳೆ ಬಿತ್ತನೆ ನಂತರ ಮಳೆ ವಿಳಂಬವಾದರೆ ಬಿತ್ತಿದ ಬೀಜ ಒಣಗಿ ನಷ್ಟವಾಗುವ ಸಾಧ್ಯತೆಯಿರುತ್ತದೆ. ಅದಕ್ಕಾಗಿ ಮಳೆಯಾದ ಮೇಲೆಯೇ ಬಿತ್ತನೆ ಆರಂಭಿಸಬೇಕು ಎಂಬುದು ಕೃಷಿ ಇಲಾಖೆ ಅಧಿಕಾರಿಗಳ ಸಲಹೆ. ಕ್ಯೂ ಆರ್ ಕೋಡ್ ವ್ಯವಸ್ಥೆ
ರೈತ ಸಂಪರ್ಕ ಕೇಂದ್ರಗಳಲ್ಲಿ ಈ ಬಾರಿ ಕ್ಯೂ ಆರ್ ಕೋಡ್ ಇರುವ ಬಿತ್ತನೆ ಬೀಜದ ಪ್ಯಾಕೆಟ್ ದಾಸ್ತಾನು ಮಾಡಲಾಗುತ್ತಿದೆ. ಬೀಜ ವಿತರಣೆ ಸಂದರ್ಭದಲ್ಲಿ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಸೀಡ್ ಎಂಐಎಸ್‌ನಲ್ಲಿ ಅಗತ್ಯ ಮಾಹಿತಿ ಭರ್ತಿ ಮಾಡಿದ ನಂತರವೇ ಬಿಲ್ ಜನರೇಟ್ ಆಗುತ್ತದೆ. ಆಧಾರ್ ಕಾರ್ಡ್ ಕೂಡ ಅಗತ್ಯವಿದ್ದು, ಯಾರದೋ ಹೆಸರಲ್ಲಿ ಇನ್ನಾರೋ ಬೀಜ, ಗೊಬ್ಬರ ಖರೀದಿ ಮಾಡುವುದನ್ನು ತಡೆಯಲು ಈ ವ್ಯವಸ್ಥೆ ಮಾಡಲಾಗುತ್ತಿದೆ. ಒಂದು ವೇಳೆ ಬೇರೆ ರೈತರ ಹೆಸರಲ್ಲಿ ಬೀಜ, ಗೊಬ್ಬರ ಖರೀದಿಸಿದರೆ ಸಂಬಂಧಪಟ್ಟವರ ಆಧಾರ್ ಸಂಖ್ಯೆ ಸೀಡ್ ಇರುವ ಮೊಬೈಲ್ ಸಂಖ್ಯೆಗೆ ಸಂದೇಶ ರವಾನೆಯಾಗುವ ವ್ಯವಸ್ಥೆ ಮಾಡಲಾಗಿದೆ. ರೈತರಿಗೆ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಮಾರಾಟ ಮಾಡಬೇಕು. ಕೃತಕ ಅಭಾವ ಸೃಷ್ಠಿಸಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು, ಅವಧಿ ಮುಗಿದ ಕೃಷಿ ಪರಿಕರಗಳನ್ನು ಮಾರಾಟ
ಮಾಡುವುದು ಹಾಗೂ ಅನ ಧಿಕೃತವಾಗಿ ಬೀಜ ಮತ್ತು ರಸಗೊಬ್ಬರ, ಪರಿಕರಗಳನ್ನು ದಾಸ್ತಾನು ಮಾಡುವುದು ಕಂಡುಬಂದಲ್ಲಿ ಮಾರಾಟಗಾರರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು.
-ಚೇತನಾ ಪಾಟೀಲ, ಜಂಟಿ ಕೃಷಿ
ನಿರ್ದೇಶಕರು, ಹಾವೇರಿ -ವೀರೇಶ ಮಡ್ಲೂರ