Advertisement

ಬೆಳಗಾವಿಯಲ್ಲಿ ರೈತ ಸಂಘಟನೆಗಳ ಕರಾಳ ದಿನ

08:33 PM May 27, 2021 | Team Udayavani |

 ಬೆಳಗಾವಿ: ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ಕಾರ್ಮಿಕ ಕಾಯ್ದೆ ವಿರೋದಿಸಿ ವಿವಿಧ ರೈತ ಸಂಘಟನೆಗಳು ಬುಧವಾರ ಬೆಳಗಾವಿಯಲ್ಲಿ ಕರಾಳ ದಿನ ಆಚರಿಸಿದವು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕಪ್ಪುಬಾವುಟ ಪ್ರದರ್ಶನ ಮಾಡಿ ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಮುಖಂಡರು ಕೇಂದ್ರದ ವಿರುದ್ಧ ರೈತರು ನಡೆಸುತ್ತಿರುವ ಚಳವಳಿ ಆರು ತಿಂಗಳು ಪೂರೈಸಿದೆ. ಈ ಹಿನ್ನೆಲೆಯಲ್ಲಿ ಸಂಯುಕ್ತ ರೈತ ಕಿಸಾನ್‌ ಮೋರ್ಚಾ ಕರೆ ನೀಡಿದ ಕರಾಳ ದಿನಾಚರಣೆಗೆ ಬೆಂಬಲವಾಗಿ ಪ್ರತಿಭಟನೆ ನಡೆಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ಕೃಷಿಕ ಸಮಾಜದ ಅಧ್ಯಕ್ಷ ಸಿದಗೌಡ ಮೋದಗಿ ಅವರು, ಕೇಂದ್ರ ಸರಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿವೆ. ಇವು ಬಂಡವಾಳಶಾಹಿಗಳಿಗೆ ಅನುಕೂಲ ಮಾಡಿಕೊಡಲು ಜಾರಿಗೆ ತಂದ ಕಾಯ್ದೆಗಳಾಗಿವೆ ಎಂದು ಆರೋಪ ಮಾಡಿದರು.

ಕೋವಿಡ್‌ ಮಹಾಮಾರಿಯಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ರೈತರ ಪರ ಕಾಳಜಿ ಇದ್ದರೆ ತಕ್ಷಣವೇ ಈ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ಮುಖಂಡ ಚೂನಪ್ಪ ಪೂಜೇರಿ ಮೊದಲಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next