ಮುದ್ದೇಬಿಹಾಳ: ಸಾಲಬಾಧೆ ತಾಳದೆ ರೈತನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಬಿದರಕುಂದಿಯಲ್ಲಿ ಬೆಳಕಿಗೆ ಬಂದಿದೆ.
Advertisement
ಮೃತನನ್ನು ಚಂದ್ರಶೇಖರ ಕಡೂರ (52) ಎಂದು ಗುರ್ತಿಸಲಾಗಿದೆ.
ಮೃತನಿಗೆ ಪತ್ನಿ, ಇಬ್ಬರು ಪುತ್ರಿಯರು, ಪುತ್ರ ಇದ್ದಾರೆ. ಖಾಸಗಿಯಾಗಿ ಬಹಳಷ್ಟು ಸಾಲ ಮಾಡಿಕೊಂಡಿದ್ದ. ಸಾಮಿಲ್ ನಲ್ಲಿ ಕೂಲಿ ಕೆಲಸಕ್ಕೂ ಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಮೇಲಾಗಿ ಆರೋಗ್ಯ ಸಮಸ್ಯೆಯೂ ಇತ್ತು ಎನ್ನಲಾಗುತ್ತಿದೆ.
ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಕಾನೂನು ಕ್ರಮ ಕೈಕೊಳ್ಳಲಾಗಿದೆ.