Advertisement

ದೆಹಲಿಯ ರೈತರ ಹೋರಾಟ ಬೆಂಬಲಿಸಿ ಹಾವೇರಿಯಲ್ಲಿ ಪ್ರತಿಭಟನೆ: ಪೊಲೀಸರಿಂದ ರೈತ ಮುಖಂಡರ ಬಂಧನ

01:59 PM Dec 02, 2020 | sudhir |

ಹಾವೇರಿ: ದೆಹಲಿಯಲ್ಲಿನ ರೈತರ ಹೋರಾಟ ಬೆಂಬಲಿಸಿ ಹಾವೇರಿಯ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯನ್ನು ಬಂದ್ ಮಾಡಿ ಬುಧವಾರ ಪ್ರತಿಭಟನೆಗೆ ಮುಂದಾಗಿದ್ದ ರೈತ ಸಂಘಟನೆಯ ನೂರಾರು ಮುಖಂಡರನ್ನು ಪೊಲೀಸ್‌ರು ಬಂಧಿಸಿದ್ದಾರೆ.

Advertisement

ನಗರದ ಹೊರವಲಯದಲ್ಲಿರುವ ಪುಣೆ-ಬೆಂಗಳೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ತಡೆಯೊಡ್ಡಿ ರೈತರು ಪ್ರತಿಭಟನೆಗೆ ಮುಂದಾಗಿದ್ದರು. ಹೆದ್ದಾರಿ ತಡೆಯದಂತೆ ಪೊಲೀಸ್‌ರು ಮನವಿ ಮಾಡಿದರೂ ಕೇಳದೇ ರೈತರು ಪ್ರತಿಭಟನೆಗೆ ಮುಂದಾದರು. ಇದರಿಂದ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪೊಲೀಸ್‌ರು ರೈತರನ್ನು ಬಂಧಿಸಿ ಪೊಲೀಸ್ ಠಾಣೆಗೆ ಒಯ್ದರು.

ಇದನ್ನೂ ಓದಿ:ಸರಕಾರ ನಿಮ್ಮ ಜೊತೆಯಿದೆ: ಮೀನುಗಾರರ ಕುಟುಂಬಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಯ

ದೆಹಲಿಯಲ್ಲಿ ಕಳೆದೊಂದು ವಾರದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ರೈತರ ಬೇಡಿಕೆ ಈಡೇರಿಕೆಗೆ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ. ಅಲ್ಲದೇ ರೈತರ ಮೇಲೆ ಜಲಫಿರಂಗಿ ದಾಳಿ, ಬ್ಯಾರಿಕೇಡ್ ಹಾಕಿ ದೆಹಲಿಯೊಳಗೆ ಬರದಂತೆ ನೋಡಿಕೊಳ್ಳುತ್ತಿದ್ದಾರೆ. ರೈತ ವಿರೋಧಿ ನೀತಿಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next