ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ ಹಾಗೂ ವಿದ್ಯುತ್ ಕಾಯ್ದೆಗಳ ಪ್ರತಿಯನ್ನು ಸುಡುವ ಮೂಲಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಶುಕ್ರವಾರ ನಗರದ ತಾಲೂಕು ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಆಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡರು. ಕಾಯ್ದೆಗಳಿಗೆ ತಿದ್ದುಪಡಿ ತಂದಿರುವ ಕ್ರಮವನ್ನು ವಿರೋಧಿ ಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಡಿ.ಆರ್.ದುಗ್ಗಪ್ಪಗೌಡ ಮಾತನಾಡಿ, ಕೃಷಿ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿಯನ್ನು ರದ್ದುಪಡಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಯಡಿ ಕೃಷಿ ಉತ್ಪನ್ನಗಳಿಗೆ ಬೆಲೆ ಭದ್ರತೆಗೊಳಿಸಿ ಎಂದು ಸರ್ಕಾರ ಮೇಲೆ ರೈತರು ಒತ್ತಡ ತರುತ್ತಿದ್ದು ಸರ್ಕಾರ ಮೊಂಡುತನ ಪ್ರದರ್ಶಿಸುತ್ತಿದೆ ಎಂದು ದೂರಿದರು. ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು 4 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ರಕ್ಷಣೆ ನೀಡಬೇಕಾದ ಸರ್ಕಾರ, ಅವರಿಗೆ ಕಿರುಕುಳ ನೀಡುವ ಮೂಲಕ ಪ್ರತಿಭಟನೆ ಯನ್ನು ವ್ಯವಸ್ಥಿತವಾಗಿ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರ ಈ ಕಾಯ್ದೆಗಳನ್ನು ಹಿಂಪಡೆಯುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲವೆಂದು ಹೇಳಿದರು. ಹಿರಿಯ ರೈತಮುಖಂಡ ಕೆ.ಕೃಷ್ಣೇಗೌಡ ಮಾತನಾಡಿ, ರೈತರ ನ್ಯಾಯಯುತವಾದ ಹಕ್ಕುಗಳ ನ್ನು ಕಿತ್ತುಕೊಳ್ಳಲು ಇವರ್ಯಾರು? ನಮ್ಮ ನ್ಯಾಯಯುತ ಹೋರಾಟ ಎಂದಿಗೂ ನಿಲ್ಲುವುದಿಲ್ಲ. ಸರ್ಕಾರ ತಿದ್ದುಪಡಿ ಕಾಯ್ದೆಗಳನ್ನು ವಪಾಸ್ ಪಡೆಯುವರೆಗೂ ಹೋರಾಟ ಮಾಡುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ರೈತಮುಖಂಡರಾದ ಎಂ.ಸಿ.ಬಸವರಾಜ್, ಎಂ.ಮಹೇಶ್, ನಿರಂಜನಮೂರ್ತಿ, ಕೆ.ಮಂಜೇ ಗೌಡ, ಅಣ್ಣೇಗೌಡ, ವೃಷಭರಾಜ್, ಜನಶಕ್ತಿ ರಾಜ್ಯಾಧ್ಯಕ್ಷ ಗೌಸ್ ಮೊಹಿದ್ದೀನ್, ಕೃಷ್ಣಮೂತಿ ì, ಕರ್ನಾಟಕ ರಕ್ಷಣಾ ವೇದಿಕೆ ಪ್ರಸನ್ನ, ಕನ್ನಡ ಸೇನೆ ಸಂಘಟನೆಯ ಜಯಪ್ರಕಾ ಶ್, ನೀಲ ಗುಳಿ ಪದ್ಮನಾಭ ಉಪಸ್ಥಿತರಿದ್ದರು.