ಹಣಕ್ಕಾಗಿ ಆಗ್ರಹಿಸಿ ಎಂ.ಕೆ.ಹುಬ್ಬಳ್ಳಿ ಪಟ್ಟಣದ ರೈತ ಶಿವಪ್ಪ ಪದ್ಮಪ್ಪ ಬೋಗಾರ(50) ಅಜ್ಜಿಯೊಬ್ಬರ ಶವಸಂಸ್ಕಾರಕ್ಕೆ ಸ್ಮಶಾನದಲ್ಲಿ ಅಗೆಯಲಾಗಿದ್ದ ಸಮಾಧಿಯಲ್ಲಿ ಕುಳಿತು ಆಕ್ರೋಶ ಹೊರಹಾಕಿದ ಘಟನೆ ಶುಕ್ರವಾರ ನಡೆದಿದೆ.
Advertisement
ನಾನು 114 ಟನ್ ಕಬ್ಬು ಮಲಪ್ರಭಾ ಸಕ್ಕರೆ ಕಾರ್ಖಾನೆಗೆ ಕಳುಹಿಸಿದ್ದೇನೆ. 85 ಸಾವಿರ ರೂ. ಬಾಕಿ ಬರಬೇಕು. ಆದರೆ, ವರ್ಷ ಕಳೆದರೂ ಹಣ ಬಂದಿಲ್ಲ. ಬಾಕಿ ಹಣಕ್ಕಾಗಿ ಕಾರ್ಖಾನೆಗೆ ಅಲೆದಾಡಿ ಸಾಕಾಗಿದೆ. ಜೀವನ ನಡೆಸುವುದೇ ಕಷ್ಟವಾಗಿದೆ. ಹಾಗಾಗಿಸಮಾಧಿಯಲ್ಲಿ ಕುಳಿತಿದ್ದೇನೆ. ಸಾಯುವುದೊಂದೇ ಬಾಕಿಯಿದ್ದು, ಕಾರ್ಖಾನೆಯ ಅಧ್ಯಕ್ಷರು, ನಿರ್ದೇಶಕರು ಬಂದು ಮಣ್ಣಾದರು ಹಾಕಿ ಹೋಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಕಾರ್ಖಾನೆ ನಿರ್ದೇಶಕರಾಗಿದ್ದ ಕೇಂದ್ರದ ಮಾಜಿ ಸಚಿವ ಬಾಬಾಗೌಡ ಪಾಟೀಲ ಅವರ ಹೆಸರನ್ನು ಪ್ರಸ್ತಾಪಿಸಿ ಬಿಲ್ ಕೊಡಿ ಎಂದು ಆಗ್ರಹಿಸಿದ್ದಾನೆ. ಅಷ್ಟೇ ಅಲ್ಲದೆ, ನಿಮ್ಮ ಸಹವಾಸವೇ ಸಾಕಾಗಿದೆ.
ಮತ್ತೂಮ್ಮೆ ಚುನಾವಣೆಯಲ್ಲಿ ಗೆದ್ದು ಬಂದು ಇದ್ದ ಕಾರ್ಖಾನೆ ಜಾಗೆಯನ್ನು ಮಾರಿ ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿರುವ ರೈತ ಶಿವಪ್ಪ ಬೋಗಾರ, ಸಾಲದ ಭಾರ ಹೊರೆಯಾಗಿದೆ. ಜೀವನ ನಿರ್ವಹಣೆ ಕಷ್ಟವಾಗಿದೆ. ನಮ್ಮ ಹಣಕ್ಕಾಗಿ ಇಷ್ಟು ಕಷ್ಟಪಡಬೇಕಿದೆ. ನಿಮ್ಮ ಸಹವಾಸವೇ ಸಾಕಾಗಿದೆ ಎಂದು ಅಲವತ್ತುಕೊಂಡಿದ್ದಾನೆ.