Advertisement

ಸಿಡಿಲಿಗೆ ರೈತ ಬಲಿ

11:08 PM Oct 18, 2019 | Lakshmi GovindaRaju |

ಬೆಂಗಳೂರು: ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಯಿತು. ಕಾರ್ಕಳದಲ್ಲಿ ರಾಜ್ಯದಲ್ಲಿಯೇ ಅಧಿಕ 8 ಸೆಂ.ಮೀ.ಮಳೆ ಸುರಿಯಿತು.

Advertisement

ಕಾರವಾರದಲ್ಲಿ ರಾಜ್ಯದಲ್ಲಿಯೇ ಗರಿಷ್ಠ 34 ಡಿ.ಸೆ.ಮತ್ತು ಬೀದರ್‌ನಲ್ಲಿ ಕನಿಷ್ಠ 19 ಡಿ.ಸೆ.ತಾಪಮಾನ ದಾಖಲಾಯಿತು. ಈ ಮಧ್ಯೆ, ಬೀದರ್‌ ಜಿಲ್ಲೆ ಚಿಟಗುಪ್ಪ ತಾಲೂಕು ಬೆಳಕೇರಾ ಶಿವಾರ ಗ್ರಾಮದಲ್ಲಿ ಗುರುವಾರ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಬನ್ನಳ್ಳಿ ಗ್ರಾಮದ ರೈತ ಉಮೇಶ ರೆಡ್ಡಿ ಹಣಮಂತರೆಡ್ಡಿ (40) ಎಂಬುವರು ಮೃತಪಟ್ಟಿದ್ದಾರೆ.

ಕಳಸ, ಕುದುರೆಮುಖ, ಕೊಟ್ಟಿಗೆಹಾರ, ಶೃಂಗೇರಿ, ನರಸಿಂಹರಾಜಪುರ, ಕೊಪ್ಪ ಸೇರಿ ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಶುಕ್ರವಾರ ಉತ್ತಮ ಮಳೆಯಾಗಿದ್ದು, ಮೂಡಿಗೆರೆ ತಾಲೂಕಿನ ಮುದ್ರೆಮನೆಯಿಂದ ಹೊಯ್ಸಳಲು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದು ಸಂಚಾರ ಸ್ಥಗಿತಗೊಂಡಿದೆ.

Advertisement

Udayavani is now on Telegram. Click here to join our channel and stay updated with the latest news.

Next