Advertisement
ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿರುವ ರೈತರು ಮೀರತ್ ಎಕ್ಸ್ ಪ್ರೆಸ್ ವೇಯಲ್ಲಿ ಕುಳಿತು ಪ್ರತಿಭಟನೆ ನಡೆಸುತ್ತಿರುವ ಪರಿಣಾಮ ಭಾರೀ ಪ್ರಮಾಣದ ಟ್ರಾಫಿಕ್ ಜಾಮ್ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
Related Articles
Advertisement
ನೂತನ ಕೃಷಿ ಕಾಯ್ದೆಗೆ ಸಂಬಂಧಿಸಿದಂತೆ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೆ ಖಾತೆ ಸಚಿವ ಪಿಯೂಶ್ ಗೋಯಲ್ ಜತೆ ಬುಧವಾರ(ಡಿ.2, 2020) ಮಾತುಕತೆ ನಡೆಸಿದ್ದರು.
ನೂತನ ಕೃಷಿ ಕಾಯ್ದೆಯನ್ನು ರದ್ದುಪಡಿಸುವಂತೆ ಆಗ್ರಹಿಸಿ ದೆಹಲಿ ಚಲೋ ನಡೆಸುತ್ತಿರುವ ಪಂಜಾಬ್, ಹರ್ಯಾಣ ರೈತರು ದೆಹಲಿಯ ಗಡಿ ಪ್ರದೇಶವಾದ ಸಿಂಘು, ನೋಯ್ಡಾ, ಗಾಝಿಪುರ್ ಮತ್ತು ಟಿಖ್ರಿಯಲ್ಲಿ ಜಮಾಯಿಸುವ ಮೂಲಕ ಪ್ರತಿಭಟನೆಯಲ್ಲಿ ತೊಡಗಿದ್ದಾರೆ.