ಮಧುಗಿರಿ : ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಮಹಿಳೆ,ಹಸು ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ಲಕ್ಲಿಹಟ್ಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.
ರೈತ ಮಹಿಳೆ ರತ್ನಮ್ಮ (45) ಮೃತಪಟ್ಟ ದುರ್ದೈವಿ. ಮಿಡಿಗೇಶಿ ಹೋಬಳಿಯ ಲಕ್ಲಿಹಟ್ಟಿ ಗ್ರಾಮದ ವಾಸಿಯಾಗಿದ್ದಾರೆ.
ಹಸು ಮೇಯಿಸಿಕೊಂಡು ಮನೆಗೆ ಹಿಂದಿರುಗುವ ಸಂಧರ್ಭದಲ್ಲಿ ತನ್ನ ಹಸು ಬಿದ್ದಿರುವುದನ್ನು ಕಂಡು ಸ್ಥಳಕ್ಕೆ ಬಂದ ಮಹಿಳೆ ತನ್ನ ಹಸುವಿನ ಪಕ್ಕದಲ್ಲಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತೆಗೆಯಲು ಹೋಗಿ ವಿದ್ಯುತ್ ಸ್ಪರ್ಶಿಸಿ ಈ ದುರ್ಘಟನೆ ಸಂಭವಿಸಿದೆ.ಹಸು ಹಾಗೂ ರೈತ ಮಹಿಳೆ ಸಾವಿಗೆ ಬೆಸ್ಕಾಂ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮಿಡಿಗೇಶಿ ಪೊಲೀಸ್ ಹಾಗೂ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಮಿಡಿಗೇಶಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.