Advertisement

ದೇವನಹಳ್ಳಿ  ಭೂಸ್ವಾಧೀನ ಕೈಬಿಡಲು ರೈತ ಸಂಘ ಆಗ್ರಹ

04:42 PM Jun 19, 2022 | Team Udayavani |

ಕೋಲಾರ: ದೇವನಹಳ್ಳಿ ಕೃಷಿ ಜಮೀನು ಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ಕೃಷಿಯನ್ನೇ ನಂಬಿರುವ ಲಕ್ಷಾಂತರ ರೈತ ಕುಟುಂಬಗಳ ರಕ್ಷಣೆಗೆ ಸರ್ಕಾರ ನಿಲ್ಲಬೇಕೆಂದು ರೈತ ಸಂಘದಿಂದ ಜಿಲ್ಲಾಧಿಕಾರಿ ಗಳ ಮುಖಾಂತರ ಸರ್ಕಾರಕ್ಕೆ ಮನವಿ ಮಾಡಲಾಯಿತು.

Advertisement

ಕೈಗಾರಿಕಾ ಅಭಿವೃದ್ಧಿಗೆ ದೇವನಹಳ್ಳಿ ವ್ಯಾಪ್ತಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಮುಂದಾಗಿರುವ ಕೆಐಎಡಿಬಿ ವಿರುದ್ಧ ನಿರಂತರ ಧರಣಿ ನಡೆಸುತ್ತಿರುವ ರೈತರ ಹೋರಾಟಕ್ಕೆ 75 ದಿನ ಪೂರೈಕೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯ ವ್ಯಾಪ್ತಿಯಲ್ಲಿ ರೈತರ ಹೋರಾಟಕ್ಕೆ ಬೆಂಬಲವಾಗಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಕೃಷಿ ಭೂಮಿ ಸ್ವಾಧೀನ ಕೈಬಿಡಬೇಕು ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಒತ್ತಾಯಿಸಿದರು.

ಶೇ.80 ಉದ್ಯೋಗ ಸೃಷ್ಟಿಸುವ ಜತೆಗೆ ಹನಿಹನಿ ಬೆವರು ಸುರಿಸಿ ದುಬಾರಿಯಾಗಿರುವ ಔಷಧ ಬಿತ್ತನೆ ಬೀಜ, ರಸಗೊಬ್ಬರಗಳ ನಡೆಯು ಕೃಷಿಯನ್ನೇ ನಂಬಿರುವ ರೈತ ಕುಟುಂಬಗಳನ್ನು ಸರ್ಕಾರ ಕೈಗಾರಿಕೆ ಹಾಗೂ ರಸ್ತೆ ಲೇಔಟ್‌ ಅಭಿವೃದ್ಧಿ ಹೆಸರಿನಲ್ಲಿ ಕೃಷಿ ಜಮೀನನ್ನು ಸ್ವಾಧೀನ ಮಾಡಿಕೊಂಡು ಕಾರ್ಪೊರೇಟ್‌ ಕಂಪನಿಗಳಿಗೆ ರೈತರ ಸ್ವಾಭಿಮಾನವನ್ನು ಅಡ ಹಿಡುವ ರೈತ ವಿರೋಧಿ ಧೋರಣೆಯನ್ನು ವಾಪಸ್‌ ಪಡೆಯದಿದ್ದರೆ ರೈತರು ರೊಚ್ಚಿಗೆದ್ದು ಸರ್ಕಾರಗಳಿಗೆ ಬುದ್ಧಿ ಕಲಿಸಲಿದ್ದಾರೆ ಎಂದರು.

ಜಿಲ್ಲಾ ಕಾರ್ಯಾಧ್ಯಕ್ಷ ವಕ್ಕಲೇರಿ ಹನುಮಯ್ಯ ಮಾತನಾಡಿ, ಈಗಾಗಲೇ ಕೆಐಎಡಿಬಿ ವಶಪಡಿಸಿಕೊಂಡಿರುವ ರೈತರ ಕೃಷಿ ಜಮೀನನ್ನು ಬಳಿಕೆ ಮಾಡಿಲ್ಲ ಮತ್ತೆ ಮತ್ತೆ ಭೂ ಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ಕೃಷಿ ಭೂಮಿ ಉಳಿವಿಗಾಗಿ ಮೂರನೇ ಮಹಾಯುದ್ಧ ರೈತರಿಂದಲೇ ಪ್ರಾರಂಭವಾಗುವ ಭವಿಷ್ಯವನ್ನು ನುಡಿದರು.

ದೇವನಹಳ್ಳಿ ಕೃಷಿ ಜಮೀನು ಸ್ವಾಧೀನ ಪ್ರಕ್ರಿಯೆ ಕೈಬಿಟ್ಟು ಯಥಾಸ್ಥಿತಿ ರೈತರು ಕೃಷಿ ಮಾಡಲು ಅವಕಾಶ ನೀಡದೇ ಇದ್ದರೆ ದೇಶಾದ್ಯಂತ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಬಂದ್‌ ಮಾಡುವ ಮೂಲಕ ಸರ್ಕಾರದ ರೈತ ವಿರೋ— ದೋರಣೆ ವಿರುದ್ಧ ಸಮರಸಾರಬೇಕಾಗುತ್ತದೆ ಎಂದು ಎಚ್ಚರಿಕೆಯೊಂದಿಗೆ ಮನವಿ ನೀಡಿದರು. ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಮನವಿಯನ್ನು ಸರ್ಕಾರಕ್ಕೆ ಕಳುಹಿಸುವ ಭರವಸೆಯನ್ನು ನೀಡಿದರು.

Advertisement

ಜಿಲ್ಲಾಧ್ಯಕ್ಷ ಐತಂಡಹಳ್ಳಿ ಮಂಜುನಾಥ, ರಾಜ್ಯ ಸಂಚಾಲಕ ಬಂಗವಾದಿ ನಾಗರಾಜಗೌಡ, ವಿಬಾಗೀಯ ಕಾರ್ಯದರ್ಶಿ ಪಾರುಕ್‌ಪಾಷ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ, ಮಂಗಸಂದ್ರ ತಿಮ್ಮಣ್ಣ, ಮಾಲೂರು ತಾಲೂಕು ಅಧ್ಯಕ್ಷ ಯಲ್ಲಣ್ಣ, ಹರೀಶ್‌, ಕುವಣ್ಣ, ವೆಂಕಟೇಶಪ್ಪ, ಗೋವಿಂದಪ್ಪ, ತೆರ್ನಹಳ್ಳಿ ಆಂಜಿನಪ್ಪ ಇತರರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next