Advertisement

ರೈತರಿಗೆ ಕೃಷಿ ಪತ್ತಿನ ಸಹಕಾರಗಳ ಕೊಡುಗೆ ಅಪಾರ

03:46 PM Sep 26, 2022 | Team Udayavani |

ಸಕಲೇಶಪುರ: ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮೀಣ ಭಾಗದ ಆರ್ಥಿಕ ಪರಿಸ್ಥಿತಿ ಉತ್ತಮಗೊಳ್ಳಲು ಅಪಾರ ಕೊಡುಗೆ ನೀಡು ತ್ತಿದೆ ಎಂದು ಶಾಸಕ ಎಚ್‌.ಕೆ ಕುಮಾರಸ್ವಾಮಿ ಹೇಳಿದರು.

Advertisement

ತಾಲೂಕಿನ ಹೆತ್ತೂರು ಗ್ರಾಮದ ಪ್ರಾಥ ಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ವತಿ ಯಿಂದ ನೂತನವಾಗಿ ನಿರ್ಮಿಸಿದ ಗೋದಾಮು ಕಟ್ಟಡವನ್ನು ಉದ್ಘಾಟಿಸಿದ ನಂತರ ನಡೆದ ಸಭಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಶಿಥಿಲಾ ವ್ಯವಸ್ಥೆಯಲ್ಲಿದ್ದ ಕಟ್ಟಡವನ್ನು ಸಂಘದ ಸಮಿತಿ ಕಾರ್ಯಕಾರಣಿ ಸಮಿತಿ ಸದಸ್ಯರು ಶ್ರಮ ಹಾಕಿ ನ ಬಾರ್ಡ್‌, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆರ್ಥಿಕ ನೆರವಿನಿಂದ ಸುಮಾರು 40 ಲಕ್ಷ ರೂ.ವೆಚ್ಚದಲ್ಲಿ ನೂತನ ಗೋದಾಮು ಕಟ್ಟಡ ನಿ ರ್ಮಾಣ ಮಾಡಿರುವುದು ಶ್ಲಾಘನೀಯ ಎಂದರು. ಗ್ರಾಮಾಂತರ ಪ್ರದೇಶಗಳಲ್ಲಿ ರೈತರು, ಕಾರ್ಮಿಕರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿ ರುವುದರಿಂದ ಕೃಷಿ ಪತ್ತಿನ ಸಹಕಾರ ಸಂಘ ಗಳು ಹಲವು ಯೋಜನೆಗಳನ್ನು ತಲುಪಿಸು ತ್ತಿದೆ. ಇದರಿಂದ ಗ್ರಾಮಾಂತರ ಪ್ರದೇಶಗಳ ಜನರಿಗೆ ಅನುಕೂಲವಾಗುತ್ತಿದೆ ಎಂದರು. ‌

ಮಾಜಿ ಶಾಸಕ ಎಚ್‌.ಎಂ.ವಿಶ್ವನಾಥ್‌ ಮಾತನಾಡಿ, ಹೆತ್ತೂರು ಕೃಷಿ ಪತ್ತಿನ ಸಹಕಾರ ಸಂಘ, ಉತ್ತಮ ರೀತಿಯಲ್ಲಿ ಕಾರ್ಯನಿರ್ವ ಹಿಸುತ್ತಿದ್ದು ಸರ್ಕಾರದ ವತಿಯಿಂದ ಎಲ್ಲ ರೀತಿಯಲ್ಲೂ ನೆರವು ನೀಡಲಾಗುತ್ತದೆ ಎಂದರು.

ಈ ವೇಳೆ ಹೆತ್ತೂರು ಗ್ರಾಪಂ ಅಧ್ಯಕ್ಷೆ ಅನು ಸೂಯ, ಜಿಪಂ ಮಾಜಿ ಸದಸ್ಯೆ ಉಜ್ಮಾರಿಜ್ವಿ ಸುದರ್ಶನ್‌, ಪ್ರಾಥಮಿಕ ಕೃಷಿ ಪತ್ತಿನ ಸಹ ಕಾರ ಸಂಘದ ಅಧ್ಯಕ್ಷರಾದ ಎಚ್‌.ಜೆ ಮೋಹನ್‌ ಕುಮಾರ್‌, ಉಪಾಧ್ಯಕ್ಷೆ ಪೂರ್ಣಿಮಾ ದೀಪಕ್‌, ನಿರ್ದೇಶಕರಾದ ಎಚ್‌.ಎಂ ಅರವಿಂದ, ವಿಜಯ ಕುಮಾರ್‌, ಉದಯ, ಪ್ರಸನ್ನ, ಬಸವರಾಜ್ ವಸಂತ್‌, ಶಾರದ ವೆಂಕಟರಮಣ, ಕೊಮಾರಯ್ಯ, ನವೀನ್‌, ತಾಪಂ ಮಾಜಿ ಉಪಾಧ್ಯಕ್ಷ ಕೆ.ಪಿ. ಕೃಷ್ಣೇಗೌಡ, ಸಂಘದ ಸಿಬ್ಬಂದಿ ಹಾಗೂ ಷೇರುದಾರರು ಇತರರಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next