Advertisement
ಇಲ್ಲಿಗೆ ಸಮೀಪದ ಅಣ್ಣೂರು ಗ್ರಾಮದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟಿಸಿ ಮಾತನಾಡಿ, ಮುಂದಿನ ದಿನಗಳಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವ ಮೊದಲೇ ಎಚ್ಚೆತ್ತುಕೊಂಡು ಹಕ್ಕುಗಳನ್ನು ಪಡೆಯಲು ಹೋರಾಟ ಮಾಡಬೇಕಾಗಿದೆ ಎಂದು ತಿಳಿಸಿದರು.
Related Articles
Advertisement
ಕಂಬಕ್ಕೆ ಕಟ್ಟಿಹಾಕಿ: ಜಲಜೀವನ್ ಮೀಷನ್ ಯೋಜನೆ ಯಡಿ ಮೀಟರ್ ಅಳವಡಿಕೆ ಮತ್ತು ರೈತರ ಬೋರ್ ವೆಲ್‌ಗೆ ಮೀಟರ್ ಅಳವಡಿಕೆಗೆ ಬಂದರೆ ಅಧಿಕಾರಿ ಗಳನ್ನು ಕಂಬಕ್ಕೆ ಕಟ್ಟಿಹಾಕಿ ಮೀಟರ್ ಅಳವಡಿಕೆಗೆ ಅವಕಾಶ ಕೊಡಬೇಡಿ ಎಂದು ಎಚ್ಚರಿಕೆ ನೀಡಿದರು.
ಬೇಡಿಕೆಗಳ ಈಡೇರಿಸಿ: ರಾಜ್ಯ ರೈತ ಸಂಘದ ಮುಖಂಡ ಎಸ್.ಸಿ.ಮಧುಚಂದನ್ ಮಾತನಾಡಿ, ರೈತರ ಬೇಡಿಕೆಗಾಗಿ ಅ.5ರಂದು ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಪ್ರತಿಭಟನೆಯನ್ನು ಜಿಲ್ಲೆಯ 5 ಭಾಗದಲ್ಲಿ ಹಮ್ಮಿಕೊಂಡಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸಿ ಬೇಡಿಕೆಗಳ ಈಡೇರಿಕೆಗಾಗಿ ಪ್ರೋತ್ಸಾ ಹಿಸಬೇಕೆಂದು ಕೋರಿದರು.
ಕಾರ್ಯಕ್ರಮಕ್ಕೂ ಮೊದಲು ಕೆ.ಎಂ.ದೊಡ್ಡಿಯ ಮದ್ದೂರು-ಮಳವಳ್ಳಿ ಹೆದ್ದಾರಿಯಿಂದ ಎತ್ತಿನಗಾಡಿಯ ಮೂಲಕ ರೈತ ಮುಖಂಡರನ್ನು ಮೆರವಣಿಗೆ ನಡೆಸಿ, ಪಟಾಕಿ ಸಿಡಿಸಿ ಗ್ರಾಮಕ್ಕೆ ಬರಮಾಡಿಕೊಂಡರು. ಗ್ರಾಮದ ಮುಖ್ಯದ್ವಾರದಲ್ಲಿ ಗ್ರಾಮ ಘಟಕದ ನಾಮ ಫಲಕ ಅನಾವರಣಗೊಳಿಸಿದರು. ಕಾರ್ಯಕ್ರಮದ ವೇಳೆ ಮಕ್ಕಳ ತಜ್ಞ ಡಾ.ಮೋಹನ್‌ಬಾಬು, ದರ್ಶನ್ ಪುಟ್ಟಣ್ಣಯ್ಯ ಅವರನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ರೈತ ಸಂಘದ ತಾಲೂಕು ಅಧ್ಯಕ್ಷ ಜಿ.ಕೆ. ರಾಮಕೃಷ್ಣ, ಕಾರ್ಯಾಧ್ಯಕ್ಷ ಜೆ.ಡಂ.ವೀರಸಂಗಯ್ಯ, ಎಸ್.ಬಿ. ಪುಟ್ಟಸ್ವಾಮಿ, ಯಧುಶೈಲ ಸಂಪತ್ತು, ಜಿ.ಎಸ್.ಲಿಂಗಪ್ಪಾಜಿ, ಜಿ.ಎಂ.ಶಂಕರ್, ವರದರಾಜು, ಎಸ್.ಕೆ.ರವಿಕುಮಾರ್, ಮರಿಸ್ವಾಮಿ, ಪಟೇಲ್ ಬೋರೇಗೌಡ, ಕೃಷ್ಣಪ್ಪ, ಶಿವರಾಜು, ರಾಜೇಶ, ಧನಂಜಯ, ಶಂಕರ್, ಚನ್ನಪ್ಪ, ಅಣ್ಣೂರು ಗ್ರಾಮ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.