ದೊಡ್ಡಬಳ್ಳಾಪುರ: ರೈತರ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ರೈತರ ಮಾರುಕಟ್ಟೆ ಮಳಿಗೆಗಳ ಸ್ಥಾಪನೆ ಅಗತ್ಯವಾಗಿದ್ದು, ಕೃಷಿ ವಿಜ್ಞಾನ ಕೇಂದ್ರಗಳು ಈ ನಿಟ್ಟಿನಲ್ಲಿ ಕಾರ್ಯೊನ್ಮುಖ ವಾಗಿದೆ. ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ರೈತರಿಗೆ ಮಾಹಿತಿ ನೀಡುತ್ತಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್ ಹೇಳಿದರು.
ತಾಲೂಕಿನ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯ 15ನೇ ವಾರ್ಷಿಕೋತ್ಸವ ಹೆಜ್ಜೆ ಗುರುತುಗಳು ಸಮಾರಂಭದಲ್ಲಿ ಮಾತನಾಡಿದರು. ರೈತರು ಸಮಗ್ರ ಕೃಷಿಯನ್ನು ಅಳವಡಿಸಿಕೊಳ್ಳುವ ಮೂಲಕ ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬೇಕಿದೆ. ಸಹಜವಾದ ಕೃಷಿಯೊಂದಿಗೆ ಹೂ,ತರಕಾರಿ ಬೆಳೆಯುವುದು, ಕೋಳಿ, ಕುರಿ ಸಾಕಾಣಿಕೆ ಹಾಗೂ ಹೈನುಗಾರಿಕೆಯನ್ನು ಅಳವಡಿಸಿಕೊಳ್ಳಬೇಕಿದೆ. ಇಂದಿನ ಯುವಕರು ಕೃಷಿಯತ್ತ ತೊಡಗಿಸಿಕೊಳ್ಳುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರಗಳಿಂದ ಕಾರ್ಯಕ್ರಮ ರೂಪಿಸಿ, ಯುವಕರನ್ನು ಕೃಷಿಗೆ ಹುರಿದುಂಬಿಸಿ ಅಗತ್ಯ ತರಬೇತಿಗಳನ್ನು ನೀಡಲಾಗುತ್ತಿದೆ ಎಂದರು.
ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ವಿ.ವೆಂಕಟಸುಬ್ರಮಣಿಯನ್ ಮಾತನಾಡಿ, ನಮ್ಮ ದೇಶವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಿದ್ದು, ಕೃಷಿಯಲ್ಲಿ ನೂತನ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿದೆ. ರೈತರು ಕೃಷಿ ಉತ್ಪನ್ನಗಳಷ್ಟೇ ಅಲ್ಲದೇ ಉಪ ಉತ್ಪನ ಗಳನ್ನು ತಯಾರಿಸಿ ಮಾರುಕಟೆ r ಮಾಡುವತ್ತ ಗಮನ ಹರಿಸಬೇಕು. ಮುಧೋಳದ ನಾಯಿ ತಳಿಯಕುರಿತಾಗಿ ಪ್ರಧಾನಿ ಅವರು ಆಡಿದ ಮಾತಿಗೆ ಈಗ ಅದರ ಬೇಡಿಕೆ ಹೆಚ್ಚಾಗಿದೆ. ಕಿಸಾನ್ ಆ್ಯಪ್‌ಗ್ಳಲ್ಲಿ ತಮ್ಮಉತ್ಪನ್ನಗಳ ಕುರಿತಾಗಿ ಪ್ರಚಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಕೃಷಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಕೆ.ನಾರಾಯಣಗೌಡ ಮಾತನಾಡಿ, ರೈತರು ಒಂದೇ ರೀತಿಯ ಬೆಳೆಯನ್ನು ಬೆಳೆಯದೇ ಸಮಗ್ರ ಕೃಷಿಗೆ ಆದ್ಯತೆ ನೀಡಬೇಕು. ರೈತರ ಸಂಘಟನೆಗಳನ್ನು ಬೆಳೆಸಿಕೊಂಡು ಮಾರುಕಟ್ಟೆ ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದು ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸ್ಥಾಪನೆಯಾದ ಬಗೆಯನ್ನು ಸ್ಮರಿಸಿದರು.ಬೆಂಗಳೂರು ಕೃಷಿ ವಿವಿ ವಿಸ್ತರಣಾ ನಿರ್ದೇಶಕ ಡಾ.ಎಂ.ಭೈರೇಗೌಡ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದರು.
ಕೃಷಿ ವಿವಿಯ ವಿಶ್ರಾಂತ ವಿಸ್ತರಣಾ ನಿರ್ದೇಶಕರು, ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆನಿರ್ದೇಶಕರು, ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಾರ್ಯನಿರ್ವಹಿಸಿದ ಮುಖ್ಯಸ್ಥರು ಹಾಗೂ ವಿಜ್ಞಾನಿಗಳುಸಿಬ್ಬಂದಿಯನ್ನು ಸನ್ಮಾನಿಸಲಾಯಿತು.ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ.ಮಲ್ಲಿಕಾರ್ಜುನಗೌಡ, ಪ್ರಗತಿಪರ ರೈತ ಎಚ್. ಅಪ್ಪಯಣ್ಣ, ಕೃಷಿ ವಿವಿಯ ಮುಖ್ಯಸ್ಥರಾದ ಸಾವಿತ್ರಮ್ಮ ಇತರರು ಇದ್ದರು.