Advertisement

ರೈತರು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ

10:27 AM Jan 27, 2019 | Team Udayavani |

ಪಾಂಡವಪುರ: ರೈತರು ಇಂದಿನ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದು ಮೈಸೂರು ತೋಟಗಾರಿಕೆ ಮಹಾ ವಿದ್ಯಾಲಯದ ಡೀನ್‌ ಡಾ. ರಾಜೇಂದ್ರಪ್ರಸಾದ್‌ ಸಲಹೆ ನೀಡಿದರು.

Advertisement

ತಾಲೂಕಿನ ಮಹದೇಶ್ವರಪುರ ಗ್ರಾಮದಲ್ಲಿ ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ ಬಾಗಲಕೋಟೆ, ತೋಟಗಾರಿಕೆ ಮಹಾ ವಿದ್ಯಾಲಯ ಮೈಸೂರು, ತಾಪಂ, ಲಕ್ಷ್ಮೀಸಾಗರ ಗ್ರಾಪಂ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ತೋಟಗಾರಿಕೆ ವಸ್ತು ಪ್ರದರ್ಶನ ಹಾಗೂ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ರೈತರ ಬೆಳೆಗಳಿಗೆ ಅಗತ್ಯಕ್ಕನುಗುಣವಾಗಿ ಔಷಧಿ ಸಿಂಪಡಣೆ ಮಾಡಬೇಕು, ಜತೆಗೆ ಸಮಗ್ರ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಂಡು ಖರ್ಚು ಕಡಿಮೆ, ಹೆಚ್ಚು ಉತ್ಪಾದನೆ ಮಾಡಬೇಕು. ನಮ್ಮ ತೋಟಗಾರಿಕೆ ಮಹಾವಿದ್ಯಾಲಯ ವಿದ್ಯಾರ್ಥಿಗಳೂ ಕಳೆದ 3 ತಿಂಗಳಿನಿಂದ ಈ ವ್ಯಾಪ್ತಿಯ ಹಲವಾರು ಹಳ್ಳಿಗಳನ್ನು ಆಯ್ಕೆ ಮಾಡಿಕೊಂಡು ರೈತರೊಂದಿಗೆ 60ಕ್ಕೂ ಹೆಚ್ಚು ಚರ್ಚೆ ಮಾಡಿ ರೈತರಿಗೆ ತೋಟಗಾರಿಕೆ ಬೆಳೆಗಳ ಬಗ್ಗೆ ಅರಿವು ಮೂಡಿಸಿದ್ದಾರೆ ಎಂದರು.

ಜಿಪಂ ಸದಸ್ಯರಾದ ಶಾಂತಲಾ, ಅನುಸೂಯ, ತಾಪಂ ಸದಸ್ಯೆ ಗಾಯತ್ರಿ, ಮಾಣಿಕ್ಯನಹಳ್ಳಿ ಗ್ರಾಪಂ ಅಧ್ಯಕ್ಷೆ ಅನಿತಾರಾಣಿ, ಲಕ್ಷ್ಮೀಸಾಗರ ಗ್ರಾಪಂ ಅಧ್ಯಕ್ಷೆ ಸೌಭಾಗ್ಯ, ಟಿ.ಎಸ್‌.ಛತ್ರ ಗ್ರಾಪಂ ಅಧ್ಯಕ್ಷೆ ಶೃತಿ, ತೋಟಗಾರಿಕೆ ಸಹಾಯಕ ನಿರ್ದೇಶಕಿ ಎಸ್‌.ಪಿ.ಸೌಮ್ಯ, ಸಹಾಯಕ ಕೃಷಿ ನಿರ್ದೇಶಕ ಮಂಜುನಾಥ್‌, ಕೃಷಿ ಅಧಿಕಾರಿಗಳಾದ ಎಚ್.ವಿ.ಜಗದೀಶ್‌, ಯೋಗೇಶ್‌, ಸಹಾಯಕ ಪ್ರಾಧ್ಯಾಪಕರಾದ ಜಗದೀಶ್‌, ಹರೀಶ್‌, ಮುತ್ತುರಾಜ್‌, ಡಾ.ಆರ್‌.ಕೆ.ರಾಮಚಂದ್ರ, ಡಾ.ಎನ್‌.ಮಮತಾಲಕ್ಷ್ಮೀ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next