Advertisement

ಬೀಜ-ಗೊಬ್ಬರ ದಾಸ್ತಾನಿಗೆ ಅನ್ನದಾತರ ಮನವಿ

03:11 PM May 11, 2022 | Shwetha M |

ವಿಜಯಪುರ: ಮುಂಗಾರು ಹಂಗಾಮಿನ ಬಿತ್ತನೆ ಆರಂಭಗೊಂಡಿದ್ದು, ಜಿಲ್ಲೆಯಲ್ಲಿ ರೈತರಿಗೆ ಗುಣಮಟ್ಟದ ಬೀಜ ಮತ್ತು ರಸಗೊಬ್ಬರ ಸರಬರಾಜು ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ಭಾರತೀಯ ಕಿಸಾನ ಸಂಘ ಕರ್ನಾಟಕ ಪ್ರದೇಶ ಕರ್ನಾಟಕ ಉತ್ತರ ಪ್ರಾಂತದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

Advertisement

ಅಪರ ಜಿಲ್ಲಾಧಿಕಾರಿ ರಮೇಶ ಕಳಸದ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎಂ.ಕೊಕರೆ, ಈಗಾಗಲೇ ಮಳೆಗಾಳ ಪ್ರಾರಂಭವಾಗಿ ಮುಂಗಾರು ಚುರುಕುಗೊಂಡಿದೆ. ಜೂನ್‌ ಮೊದಲದ ವಾರದಲ್ಲಿ ಮುಂಗಾರು ಬಿತ್ತನೆ ಆರಂಭಗೊಳ್ಳಲಿದೆ. ಕಾರಣ ಸಕಾಲದಲ್ಲಿ ರೈತರಿಗೆ ಗುಣಮಟ್ಟದ ಹಾಗೂ ರೋಗನಿರೋಧಕ ಶಕ್ತಿಯುಳ್ಳ ಬೀಜ ವಿತರಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಪ್ರಮುಖವಾಗಿ ಹೆಸರು, ಉದ್ದು, ಮೆಕ್ಕೆಜೋಳ, ಶೇಂಗಾ, ತೊಗರಿ, ಹತ್ತಿ ಬೀಜದ ಅಗತ್ಯ ಹೆಚ್ಚಾಗಿರುತ್ತದೆ. ಕಾರಣ ಸರ್ಕಾರ ಹಾಗೂ ಜಿಲ್ಲಾಡಳಿತ ರೈತ ಸಂಪರ್ಕ ಕೇಂದ್ರಗಳಲಿ ತ್ವರಿತವಾಗಿ ಜಿಲ್ಲೆಯ ರೈತರಿಗೆ ಅಗತ್ಯವಾಗಿರುವ ಬೀಜ-ಗೊಬ್ಬರವನ್ನು ದಾಸ್ತಾನು ಮಾಡಿಕೊಳ್ಳಬೇಕು. ತ್ವರಿತವಾಗಿ ವಿತರಣೆಗೂ ಕ್ರಮ ಕೈಗೊಂಡು ರೈತರಿಗೆ ಮುಂಗಾರು ಬಿತ್ತನೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದಲ್ಲದೇ ಮುಂಗಾರು ಹಂಗಾಮಿನಲ್ಲಿ ಅಗತ್ಯಕ್ಕೆ ತಕ್ಕಂತೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಬೇಕು. ರಸಗೊಬ್ಬರ ಮಾರಾಟದ ವ್ಯಾಪಾರಿಗಳು ಕೃತಕ ಅಭಾವ ಸೃಷ್ಟಿಸುವುದನ್ನು ತಡೆಯಲು ಈಗಲೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಭವಿಷ್ಯದಲ್ಲಿ ರೈತರಿಗೆ ಯಾವ ಬೀಜ-ಗೊಬ್ಬರದ ಸಮಸ್ಯೆ ಆಗದಂತೆ ಕೃಷಿ ಇಲಾಖೆ ಗಮನ ಹರಿಸಬೇಕು. ಈ ಬಗ್ಗೆ ಜಿಲ್ಲಾಡಳಿತ ಸೂಕ್ತ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.

ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲನಗೌಡ ಪಾಟೀಲ, ಕರ್ನಾಟಕ ಉತ್ತರ ಪ್ರಾಂತ ರಾಜ್ಯ ಉಪಾಧ್ಯಕ್ಷ ಗುರುನಾಥ ಬಗಲಿ, ಎಂ.ಆರ್‌.ಮುಲ್ಲಾ ಜಿಲ್ಲಾ ಕಾರ್ಯದರ್ಶಿ, ಎ.ಎಂ.ಪಾಟೀಲ, ಎಸ್‌. ಎಂ.ಬಿರಾದಾರ, ಕಾಮಣ್ಣ ಬಗಲಿ ಸೇರಿದಂತೆ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next