Advertisement

ಬೇಡಿಕೆ ಈಡೇರಿಕೆಗೆ ರೈತ ಸಂಘ ಪ್ರತಿಭಟನೆ

05:43 AM Jul 08, 2020 | Lakshmi GovindaRaj |

ಮಂಡ್ಯ/ಮದ್ದೂರು: ಎಪಿಎಂಸಿ, ಭೂ ಸುಧಾರಣೆ, ವಿದ್ಯುತ್‌ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು ಹಾಗೂ  ಕಲ್ಲು ಗಣಿಗಾರಿಕೆಯನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಒತ್ತಾಯಿಸಿ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು  ಪ್ರತಿಭಟನೆ ನಡೆಸಿದರು. ನಗರದ ಡೀಸಿ ಕಚೇರಿ ಬಳಿ ಜಮಾಯಿಸಿದ ಕಾರ್ಯ  ಕರ್ತರು, ಪ್ರತಿಭಟನಾ ಸಭೆ ನಡೆಸಿ ಹಲವು ನಿರ್ಣಯಗಳನ್ನು ಕೈಗೊಂಡರು. ನಂತರ ಡೀಸಿ ಡಾ.ಎಂ.ವಿ.ವೆಂಕಟೇಶ್‌ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.

Advertisement

ಸರ್ಕಾರಗಳ ವಿರುದ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಎಪಿಎಂಸಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು. ವಿದ್ಯುತ್‌ ಖಾಸಗೀಕರಣ ಮತ್ತು ಭೂಸುಧಾರಣೆ ಕಾಯ್ದೆಗಳ ತಿದ್ದುಪಡಿ ಜಾರಿಗೆ ತರಬಾರದು. ಕೆಆರ್‌ಎಸ್‌  ಸುತ್ತಮುತ್ತ ಯಾವುದೇ ಗಣಿಗಾರಿಕೆ ಮಾಡಬಾರದು ಎಂಬ ಸರ್ಕಾರದ ಆದೇಶವಿದ್ದರೂ ಅಕ್ರಮವಾಗಿ ನಡೆಯುತ್ತಿರುವ ಗಣಿಗಾರಿಕೆಯನ್ನು ನಿಲ್ಲಿಸುವುದರ ಜೊತೆಗೆ ಶ್ರೀರಂಗಪಟ್ಟಣದ ಟಿ.ಎಂ. ಹೊಸೂರು, ಮಂಡ್ಯದ ಅನುಕುಪ್ಪೆ ಗ್ರಾಮದಲ್ಲಿ ನಡೆಯುವ ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ  ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ನೀರು ಬಿಡುಗಡೆ ಮಾಡಿ: ಕೆಆರ್‌ಎಸ್‌, ಹೇಮಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದ ನಾಲೆಗಳು ಹಾಗೂ ಅಣೆಕಟ್ಟುಗಳ ಅಡ್ಡ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕು. ಮೈಷುಗರ್‌ ಕಾರ್ಖಾನೆ ಸರ್ಕಾರದ ಸ್ವಾಮ್ಯದಲ್ಲಿಯೇ  ಪ್ರಾರಂಭಿಸಬೇಕು ಎಂದು ಆಗ್ರಹಿಸಿದರು. ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್‌.ಕೆಂಪೂಗೌಡ, ಮಾಜಿ ಅಧ್ಯಕ್ಷ ಶಂಭೂನಹಳ್ಳಿ ಸುರೇಶ್‌, ಕೆ.ಎಸ್‌.ಬಾಲಚಂದ್ರ, ಜಿ.ಎಸ್‌.ಲಿಂಗಪ್ಪಾಜಿ,  ಎಸ್‌.ಕೆ.ರವಿಕುಮಾರ್‌, ಕೆ.ಟಿ.ಗೋವಿಂದೇಗೌಡ, ಅಣ್ಣೂರು ಮಹೇಂದ್ರ, ಪಿ.ಬಾಲಕೃಷ್ಣ, ಚಂದ್ರುಶಿವಳ್ಳಿ, ಅಮೃತಿ ರಾಜಶೇಖರ್‌, ಮಹಿಳಾಧ್ಯಕ್ಷೆ ಲತಾಶಂಕರ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next