Advertisement

ಕಾಯ್ದೆಯಿಂದ ರೈತರಿಗೆ ಹೆಚ್ಚು ಅನುಕೂಲ

03:57 PM Sep 24, 2020 | Suhan S |

ಮೈಸೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಎಂ. ರಾಜೇಂದ್ರ ತಿಳಿಸಿದರು.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ರೈತರಗೆ ಕೃಷಿ ಬಗ್ಗೆ ಹೆಚ್ಚು ಜ್ಞಾನ ಇರುವುದಿಲ್ಲ. ಯಾವ ಬೆಳೆಯನ್ನು ಯಾವ ಪ್ರಮಾಣದಲ್ಲಿ ಬೆಳೆಯಬೇಕು ಎನ್ನುವ ಬಗ್ಗೆ ತಿಳಿದಿರುವುದಿಲ್ಲ. ಆದರೆ, ಖಾಸಗಿ ಕಂಪನಿಗಳು ಕೃಷಿ ಭೂಮಿಯನ್ನು ಖರೀದಿಸಿ, ಕೃಷಿಯನ್ನು ಅಭಿವೃದ್ಧಿ ಪಡಿಸಿದಾಗ, ಅದನ್ನು ಇತರೇ ರೈತರು ಅನುಸರಿಸುತ್ತಾರೆ. ಈ ನಿಟ್ಟಿನಲ್ಲಿ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯು ರೈತಪರವಾಗಿದೆ. ಬಂಡವಾಳ ಶಾಹಿಗಳು ಎಲ್ಲಾ ಭೂಮಿಯನ್ನು ಖರೀದಿಸಲು ಸಾಧ್ಯವಿಲ್ಲ. ನಮ್ಮಲ್ಲಿ ಈಗ ಶಿಕ್ಷಣ ಪಡೆದವರು ಹೆಚ್ಚು ಮಂದಿ ಇದ್ದಾರೆ. ಆದರೆ, ಅವರು ವಿವಿಧೆಡೆ ಕೆಲಸಗಳಿಗಾಗಿ ವಲಸೆ ಹೋಗಿದ್ದಾರೆ. ಅವರನ್ನು ಮತ್ತೆ ಕೃಷಿಯತ್ತ ಸೆಳೆಯುವ ಪ್ರಯತ್ನಕ್ಕಾಗಿ ಈ ಕಾಯ್ದೆ ನೆರವಾಗಲಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ಸೋಮಶೇಖರ್‌ ಮಾತನಾಡಿ, ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯು ರೈತರಿಗೆ ಪೂರಕವಾಗಿದೆ. ಅಲ್ಲದೆ, ಯುವ ಸಮೂಹವನ್ನುಕೃಷಿಯತ್ತಸೆಳೆಯುವಲ್ಲಿಯೂ ಕಾಯ್ದೆ ಸಹಕಾರಿಯಾಗಿದೆ. ಆದರೆ, ವಿರೋ ಪಕ್ಷಗಳು ಕಾಯ್ದೆಯ ಮಹತ್ವ ತಿಳಿಯದೇ ಕೂಗೆಬ್ಬಿಸುವಕೆಲಸ ಮಾಡುತ್ತಿವೆ ಎಂದರು.

ಇದರೊಂದಿಗೆ ರೈತರ (ಕಲ್ಯಾಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಮೂಲಕ ಕೃಷಿ ಉದ್ಯಮ ಸಂಸ್ಥೆಗಳು, ಸಗಟು ವ್ಯಾಪಾರಿಗಳು, ರಫ್ತುದಾರರು, ಚಿಲ್ಲರೆ ವ್ಯಾಪಾರಿಗಳೊಂದಿಗೆ ವಹಿವಾಟು ನಡೆಸಲು ರೈತರಿಗೆ ಭದ್ರತೆ ಹಾಗೂ ಪ್ರೋತ್ಸಾಹ ನೀಡುವ ಕೃಷಿ ಒಪ್ಪಂದಗಳ ಕುರಿತು ರಾಷ್ಟ್ರೀಯ ಚೌಕಟ್ಟು ನಿರ್ಮಿಸುವ ಧ್ಯೇರ್ಯವನ್ನು ಹೊಂದಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಹಿಂದುಳಿದ ಮೋರ್ಚಾದ ಕಾರ್ಯದರ್ಶಿ ಸುರೇಶ್‌ ಕುಮಾರ್‌, ರೈತಮೋರ್ಚಾ ಅಧ್ಯಕ್ಷ ರಮೆಶ್‌, ಬಿಜೆಪಿ ಜಿಲ್ಲಾ ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಮಹೇಶ್‌, ಡಾ .ಕೆ. ವಸಂತ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

Advertisement

ಕೃಷಿ ಉತ್ಪನ್ನಖರೀದಿ, ಮಾರಾಟಕ್ಕೆ ಸ್ವಾತಂತ್ರ್ಯ :  ಭೂ ಸುಧಾರಣಾಕಾಯ್ದೆಯಿಂದ ರೈತರಿಗೆ ನಿಶ್ಚಿತ ಲಾಭ ಹಾಗೂ ವ್ಯಾಪಾರಕ್ಕೂ ರಕ್ಷಣೆ ಸಿಗಲಿದೆ. ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ ಅನ್ವಯ ರೈತರಿಗೆ ಹಾಗೂ ವ್ಯಾಪಾರಿಗಳಿಗೆ ತಮಗಿಷ್ಟ ಬಂದ ಕಡೆ ಕೃಷಿ ಉತ್ಪನ್ನ ಮಾರಾಟ ಹಾಗೂ ಖರೀದಿ ಮಾಡುವ ಸ್ವಾತಂತ್ರ್ಯ ನೀಡಲಾಗಿದೆ. ಪರ್ಯಾಯ ವ್ಯಾಪಾರ ವ್ಯವಸ್ಥೆ ಮೂಲಕ ಬೆಳೆಗಳ ನ್ಯಾಯಯುತ ದರ ನಿಗದಿಪಡಿಸಲು ನೆರವು ನೀಡಲಾಗಿದೆ. ಹೀಗಾಗಿ ಬಿಜೆಪಿ ಸರ್ಕಾರದ ಕಾಯ್ದೆ, ಕಾನುನುಗಳು ರೈತರಿಗೆ ಅನುಕೂಲವಾಗಿವೆ.ಈಬಗ್ಗೆಅರ್ಥಮಾಡಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾ ಗ್ರಾಮಾಂತರ ಅಧ್ಯಕ್ಷೆ ಮಂಗಳಾ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next