ನಡೆಸಿದರು.
Advertisement
ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 50 ಟಿಎಂಸಿ ನೀರಿದ್ದರೂ ಕಾಲುವೆಗಳಿಗೆ ನೀರು ಹರಿಸಲು ನೀರಾವರಿ ಸಲಹಾ ಸಮಿತಿ ನಿರ್ಣಯಿಸಿರುವುದು ಅವೈಜ್ಞಾನಿ. ಕಳೆದ ವರ್ಷ 39 ಟಿಎಂಸಿ ನೀರಿದ್ದ ಸಂದರ್ಭದಲ್ಲಿ ಕಾಲುವೆಗಳಿಗೆ ನೀರು ಹರಿಸಲಾಗಿತ್ತು.ಈಗ 50 ಟಿಎಂಸಿ ನೀರಿದ್ದರೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಹಾಗೂ ಸಚಿವ ಸಂತೋಷ ಲಾಡ್ ಮತ್ತು ಸಚಿವ ಬಸವರಾಜ ರಾಯರಡ್ಡಿ ಕುತಂತ್ರ ನಡೆಸಿ ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ರೈತರು ನೀರು ಬಿಡಿಸಲು ಹಲವು ಸಲ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ ಎಂದು ದೂರಿದರಲ್ಲದೇ ಈಗಲಾದರೂ ಕಾಲುವೆಗೆ ನೀರು ಹರಿಸುವಂತೆ ರೈತ ಮುಖಂಡರು ಆಗ್ರಹಿಸಿದರು.
ಕಾಲುವೆಗೆ ನೀರು ಹರಿಸುವಂತೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರಿಂದ ತಳ್ಳಾಟ-ನೂಕಾಟ ನಡೆದಿದ್ದರಿಂದ ಕೆಲ ಹೊತ್ತು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಹೋರಾಟದಲ್ಲಿ ಪಾಲ್ಗೊಂಡ ಕನಕಗಿರಿ ಶಾಸಕ ಶಿವರಾಜ್‌ತಂಗಡಗಿ ಪ್ರತಿಭಟನಾ ನಿರತ ರೈತರನ್ನುದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ ಕನಕಗಿರಿಯ ಬಿಜೆಪಿ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು. ನಂತರ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ-ಜೆಡಿಎಸ್ ಮುಖಂಡರನ್ನು ತರಾಟೆಗೆ ತೆಗೆದುಕೊಂಡ ಪರಿಣಾಮ. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು.