Advertisement
ನಗರದ ಎಪಿಎಂಸಿ ಆವರಣದಲ್ಲಿರುವ ರೈತ ಭವನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ವತಿಯಿಂದ ಸೋಮವಾರ ನಡೆದ ತಾಲೂಕು ಹಾಗೂ ಜಿಲ್ಲಾ ಸಮಿತಿ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
Related Articles
Advertisement
ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜುಲೈ 5 ರಂದು ಮಂಡಿಸಲಿರುವ ಬಜೆಟ್ ಕಾದು ನೋಡುತ್ತೇವೆ. ಒಂದು ವೇಳೆ ರೈತರ ಸಾಲ ಮನ್ನಾ ಮಾಡದಿದ್ದರೆ ಉಗ್ರ ಚಳವಳಿ ಮಾಡಲಾಗುವುದು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗಬೇಕು. ಅಕ್ರಮ-ಸಕ್ರಮ ಯೋಜನೆಯಡಿ ರೈತರ ಹೊಲಗಳಿಗೆ ಪರಿವರ್ತಕಗಳನ್ನು ಅಳವಡಿಸಿ ನ್ಯೂನತೆಗಳನ್ನು ಸರಿಪಡಿಸಬೇಕು. ಪ್ರತಿ ತಿಂಗಳು ರೈತರ ಸಭೆ ಕರೆದು ಸಮಸ್ಯೆಗಳನ್ನು ಜಿಲ್ಲಾಡಳಿತ ಹಾಗೂ ಸರ್ಕಾರದ ಗಮನಕ್ಕೆ ತರುವ ಕೆಲಸ ಆಗಬೇಕು ಎಂದರು.
ಧಾರವಾಡ ಜಿಲ್ಲೆಯ ನವಲಗುಂದ-ನರಗುಂದದಲ್ಲಿ ಜುಲೈ 21 ರಂದು ರೈತ ಹುತಾತ್ಮರ ದಿನಾಚರಣೆ ನಡೆಯಲಿದೆ. ನಮ್ಮ ಜಿಲ್ಲೆಯಿಂದ ಕನಿಷ್ಠ 500 ರೈತರಾದರೂ ಪಾಲ್ಗೊಂಡು ಹುತಾತ್ಮ ರೈತರಿಗೆ ಗೌರವ ಸಮರ್ಪಿಸಬೇಕು ಎಂದು ಮನವಿ ಮಾಡಿದರು.
ನಿವೃತ್ತ ಶಿಕ್ಷಕ ಈಶ್ವರಪ್ಪ ಮಾತನಾಡಿ, ರೈತರಲ್ಲಿ ಸಂಘಟನೆ ಇಲ್ಲದಿದ್ದರೆ ಏನು ಮಾಡಲೂ ಸಾಧ್ಯವಿಲ್ಲ. ಎಲ್ಲಾ ಸರ್ಕಾರಗಳು ರೈತರ ಪರವಾಗಿವೆ ಎಂದು ಮೊಸಳೆ ಕಣ್ಣೀರು ಸುರಿಸುತ್ತವೆ. ಹಗಲಿರುಳು ರೈತರು ಕಷ್ಟ ಪಟ್ಟರೂ ಸುಖವಾಗಿಲ್ಲ. ಏಕೆಂದರೆ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸಿಗುತ್ತಿಲ್ಲ. ರೈತರ ನೋವು ಕಡಿಮೆಯಾಗಬೇಕಾದರೆ ಹೋರಾಟ ಗಟ್ಟಿಯಾಗಬೇಕು ಎಂದು ಅಭಿಪ್ರಾಯಪಟ್ಟರು.
ಸಾಲ ಮನ್ನಾ ಮಾಡಿ ಎಂದು ಸರ್ಕಾರದ ಮೇಲೆ ಬಲವಾದ ಒತ್ತಡ ಹೇರುವ ರೈತರೇ ಇಲ್ಲದಂತಾಗಿದ್ದಾರೆ. ಸಂಘಟನೆಗಳು ಬಲವಾಗಬೇಕಾದರೆ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ರೈತ ಸಂಘ ಹುಟ್ಟಿಕೊಳ್ಳಬೇಕು. ಆಗ ಮಾತ್ರ ರೈತರ
ಬಲವನ್ನು ಯಾವ ಸರ್ಕಾರಗಳೂ ಕುಗ್ಗಿಸಲು ಸಾಧ್ಯವಿಲ್ಲ ಎಂದರು.
ಸಭೆಯಲ್ಲಿ ತಾಪಂ ಸದಸ್ಯ ಕರಿಯಪ್ಪ, ರೈತ ಮುಖಂಡರಾದ ತಿಮ್ಮಣ್ಣ, ಕೆಂಚಯಲ್ಲಪ್ಪ, ಸಿದ್ದಮ್ಮ, ಇಮಾಂಸಾಬ್, ತಿಪ್ಪೇಸ್ವಾಮಿ, ಚಂದ್ರು, ಶೇಖರಪ್ಪ, ಲಕ್ಷ್ಮೀನರಸಿಂಹಸ್ವಾಮಿ, ಚಿಕ್ಕಪ್ಪನಹಳ್ಳಿ ಸ್ವಾಮಿ, ತಿಪ್ಪೇಸ್ವಾಮಿ ಮೊದಲಾದವರು
ಭಾಗವಹಿಸಿದ್ದರು.