ಮಂಡ್ಯ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಡೀಸಿ ಕಚೇರಿ ಬಳಿ ಜಮಾಯಿಸಿ ದ ಪ್ರತಿಭಟನಾಕಾರರು, ಕೆಲ ಕಾಲ ಧರಣಿ ನಡೆಸಿ ಡೀಸಿಗೆ ಮನವಿ ಸಲ್ಲಿಸಿದರು. ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ಮಾಡಬಾರದು.
ಎಪಿಎಂಸಿ ಕಾಯ್ದೆ ವಾಪಸ್ ಪಡೆಯಬೇಕು. ವಿದ್ಯುತ್ ಖಾಸ ಗೀಕರಣ ಮಾಡಬಾರದು. ರೈತ ವಿರೋಧಿ ಬಿತ್ತನೆ ಬೀಜ ಕಾಯ್ದೆಯನ್ನು ಜಾರಿಗೆ ತರ ಬಾರದು ಎಂದು ಆಗ್ರಹಿಸಿದರು. ಸರ್ಕಾರ ಕೋವಿಡ್ 19 ಸಂಕಷ್ಟದಲ್ಲಿ ಜನವಿ ರೋಧಿ ಕಾಯ್ದೆಗಳನ್ನು ಜಾರಿಗೆ ತರು ತ್ತಿದ್ದು, ಇದರಿಂದ ರೈತರು, ದಲಿತರು, ಕಾರ್ಮಿಕರು ಸೇರಿದಂತೆ ಇನ್ನಿತರೆ ಶ್ರಮಿಕರ ಜೀವನದ ಹಕ್ಕು ನಾಶವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉಚಿತ ಚಿಕಿತ್ಸೆ ನೀಡಿ: ಕೋವಿಡ್ ಒಂದು ದೊಡ್ಡ ಆರೋಗ್ಯ ತುರ್ತು ಪರಿಸ್ಥಿತಿಯಾ ಗಿದ್ದು, ಈ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡುವುದು ಸರ್ಕಾರದ ಹೊಣೆಗಾರಿಕೆ ಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ, ಸಿಎಂ ಪರಿಹಾರ ನಿಧಿಗೆ ಕೋಟ್ಯಂತರ ರೂ. ಹಣ ಸಂದಾಯವಾಗಿದೆ. ಸರ್ಕಾರ ರೋಗ ಸೋಂಕಿತರ ಚಿಕಿತ್ಸೆಗಾಗಿ ಹಣ ಭರಿಸಬೇಕು ಎಂದು ತಿಳಿಸಿರುವುದು ಜನವಿರೋಧಿಯಾಗಿದೆ.
ಇದನ್ನು ವಾಪಸ್ ಪಡೆದು ಉಚಿತವಾಗಿ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಶಾಸಕ ಸಿ.ಎಸ್.ಪುಟ್ಟರಾಜು, ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾ ಧ್ಯಕ್ಷ ಶಂಭೂನಹಳ್ಳಿ ಸುರೇಶ್, ಬೊಮ್ಮೇಗೌಡ, ಲಿಂಗಪ್ಪಾಜಿ, ಎ.ಎಲ್. ಕೆಂಪೂಗೌಡ, ಶೆಟ್ಟಹಳ್ಳಿ ರವಿಕುಮಾರ್, ಕೆ.ಟಿ.ಗೋವಿಂದೇಗೌಡ, ಎಸ್.ಎನ್. ಸಿದ್ದೇಗೌಡ, ಇಂಡುವಾಳು ಸಿದ್ದೇಗೌಡ, ಕನ್ನಲಿ ಚಂದ್ರು, ಪಿ.ಕೆ.ನಾಗಣ್ಣ ಇದ್ದರು.
ಸದನದ ಒಳಗೆ ಹೋರಾಟ: ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ರೈತ ವಿರೋಧಿ ನೀತಿಯಾಗಿದ್ದು, ಕಾಯ್ದೆ ವಾಪಸ್ಸು ಪಡೆಯು ವರೆವಿಗೂ ಸದನದ ಹೊರಗೆ ಮತ್ತು ಒಳಗೆ ಹೋರಾಟ ರೂಪಿಸಲಾಗುವುದು ಎಂದು ಶಾಸಕ ಸಿ.ಎಸ್.ಪುಟ್ಟರಾಜು ಎಚ್ಚರಿಕೆ ನೀಡಿದರು. ಧರಣಿಯಲ್ಲಿ ಪಾಲ್ಗೊಂಡು ಮನವಿ ಸ್ವೀಕರಿಸಿ ಮಾತನಾಡಿ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿಗೆ ಸರ್ಕಾರ ಮುಂದಾಗಿರುವುದು ಸರಿಯಲ್ಲ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಜೆಡಿಎಸ್ ನಾಯಕರಾದ ಎಚ್ .ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಸದನದ ಒಳಗೆ ಹಾಗೂ ಹೊರಗೆ ಹೋರಾಟ ಮಾಡುವ ಮೂಲಕ ಇದನ್ನು ವಾಪಸ್ಸು ಪಡೆಯುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು. ಶಾಸಕರ ಸಭೆ ಕರೆದು ಈ ಬಗ್ಗೆ ಚರ್ಚಿಸಿ ಹೋರಾಟಕ್ಕೆ ನಮ್ಮ ಬೆಂಬಲ ಇದೆ ಎಂದು ನಮ್ಮ ವರಿಷ್ಠರು ತಿಳಿಸಿದ್ದಾರೆ. ನಾವೂ ಸಹ ನಿಮ್ಮ ಜೊತೆಹೋರಾಟ ಮಾಡುತ್ತೇವೆ. ಇಂತಹ ಕೆಟ್ಟ ಸ್ಥಿತಿಗೆ ಆಳುವ ಸರ್ಕಾರಗಳು ದೂಡಿರಲಿಲ್ಲ. ಕಾಯ್ದೆಯನ್ನು ವಾಪಸ್ಸು ಪಡೆಯಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.