Advertisement

Dilli Chalo: ರೈತರಿಂದ ದೆಹಲಿ ಚಲೋ.. ಗಡಿಯಲ್ಲಿ ಬಿಗಿ ಭದ್ರತೆ, ಮತ್ತೆ ಟ್ರಾಫಿಕ್ ಜಾಮ್ ಭೀತಿ

10:49 AM Dec 06, 2024 | Team Udayavani |

ನವದೆಹಲಿ: ಕಳೆದ ಎಂಟು ತಿಂಗಳಿಂದ ಪಂಜಾಬ್ ಹರಿಯಾಣ ಗಡಿಯ ಶಂಭು ಗಡಿಯಲ್ಲಿ ಬೀಡುಬಿಟ್ಟಿರುವ ರೈತರು ಇಂದು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಇಂದು(ಶುಕ್ರವಾರ) ಮಧ್ಯಾಹ್ನ ದೆಹಲಿ ಚಲೋ ಮೆರವಣಿಗೆ ನಡೆಸಲಿದ್ದು ಅದರಂತೆ ಗಡಿಯಲ್ಲಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ.

Advertisement

ಶಂಭು ಗಡಿಯಿಂದ ಮಧ್ಯಾಹ್ನ 1 ಗಂಟೆಗೆ ಪ್ರಾರಂಭವಾಗುವ ಮೆರವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ಗಡಿಯಲ್ಲಿ ಬ್ಯಾರಿಕೇಡ್‌ಗಳನ್ನು ಇರಿಸಿ ಹೆಚ್ಚಿನ ಭದ್ರತೆ ಏರ್ಪಡಿಸಲಾಗಿದೆ ಅಷ್ಟು ಮಾತ್ರವಲ್ಲದೆ ಅಂಬಾಲಾ ಜಿಲ್ಲಾಡಳಿತವು ಭಾರತೀಯ ನಾಗರಿಕ ಭದ್ರತಾ ಸಂಹಿತೆಯ ಸೆಕ್ಷನ್ 163 ರ ಅಡಿಯಲ್ಲಿ ಜಿಲ್ಲೆಯಲ್ಲಿ ಐದು ಅಥವಾ ಅದಕ್ಕಿಂತ ಹೆಚ್ಚು ಮಂದಿ ಸೇರಿ ಯಾವುದೇ ಕಾನೂನುಬಾಹಿರ ಸಭೆಯನ್ನು ನಡೆಸದಂತೆ ನಿಷೇಧಿಸುವ ಆದೇಶವನ್ನು ಹೊರಡಿಸಿದೆ.

ಟ್ರಾಫಿಕ್ ಜಾಮ್ ಭೀತಿ:
ರೈತರು ಪ್ರತಿಭಟನೆ ಮೆರವಣಿಗೆ ನಡೆಸುವ ನಿಟ್ಟಿನಲ್ಲಿ ಶಂಭು ಗಡಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರಿಕೇಡ್ ಇಟ್ಟು ವಾಹನಗಳನ್ನು ತಪಾಸಣೆ ನಡೆಸಿ ಬಿಡುವ ಕಾರ್ಯವನ್ನು ಪೊಲೀಸ್ ಅಧಿಕಾರಿಗಳು ನಡೆಸುತ್ತಿದ್ದು ಹಾಗಾಗಿ ದೆಹಲಿ ಮಾರ್ಗದಲ್ಲಿ ಇಂದೂ ಕೂಡ ಟ್ರಾಫಿಕ್ ಜಾಮ್ ಉಂಟಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದೆಹಲಿಯ ಸಂಸತ್ ವರೆಗೆ ಪ್ರತಿಭಟನೆ ನಡೆಸಲಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದರಿಂದ ವಾಹನಗಳನ್ನು ತಡೆಯುವ ನಿಟ್ಟಿನಲ್ಲಿ ಕಾಲ್ನಡಿಗೆಯ ಮೂಲಕವೇ ದೆಹಲಿಗೆ ಪ್ರವೇಶಿಸುವ ನಿರ್ಧಾರ ರೈತರು ಮಾಡಿದ್ದು ಈ ನಡುವೆ ಪೊಲೀಸರು ಪ್ರತಿಭಟನಾ ಮೆರವಣಿಗೆ ತಡೆಯುವ ಎಲ್ಲ ತಯಾರಿಯನ್ನೂ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Advertisement

 

Advertisement

Udayavani is now on Telegram. Click here to join our channel and stay updated with the latest news.

Next