ಹಾನಗಲ್ಲ: ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಾಗೂ ಸರಕಾರದ ರೈತ ವಿರೋಧಿ ನೀತಿ ಖಂಡಿಸಿ ಮಂಗಳವಾರ ತಹಶೀಲ್ದಾರ್ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕು ಘಟಕದ ನೇತೃತ್ವದಲ್ಲಿ ರೈತರು ಪ್ರತಿಭಟನೆ ನಡೆಸಿದರು.
Advertisement
ಈ ವೇಳೆ ಮಾತನಾಡಿದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಆರ್.ವಿ. ಕೆಂಚಳ್ಳೇರ, ರೈತರ ನ್ಯಾಯಯುತಬೇಡಿಕೆಗಳಿಗೆ ಸ್ಪಂದಿ ಸದ ಸರಕಾರಗಳ ಅಗತ್ಯ ನಮಗಿಲ್ಲ. ರೈತರ ಸಂಕಷ್ಟಗಳಿಗೆ ಸ್ಪಂದಿಸದ ಜನಪ್ರತಿನಿಧಿಗಳು ನಮಗೆ ಬೇಕಾಗಿಲ್ಲ.
2 ಸಾವಿರ ರೂ. ಪರಿಹಾರ ನೀಡಿರುವುದು ಹಾಸ್ಯಾಸ್ಪದ. ಅದನ್ನು ರೈತ ಮುಖಂಡರು ಸರಕಾರಕ್ಕೆ ಮರಳಿ ನೀಡಿದ್ದೇವೆ. ಕೇಂದ್ರ
ಹಾಗೂ ರಾಜ್ಯ ಸರಕಾರಕ್ಕೆ ರೈತರ ನೋವು ಅರ್ಥವಾಗುತ್ತಿಲ್ಲ. ಈ ಸರಕಾರ ಯಾರಿಗಾಗಿ ಇದೆ ಎಂಬುದೇ ಅರ್ಥವಾಗುತ್ತಿಲ್ಲ. ರೈತರೇ ಎಚ್ಚರಗೊಳ್ಳಿ ನಮ್ಮ ಸಮಸ್ಯೆ ಪರಿಹಾರಕ್ಕೆ ಹೋರಾಟವೊಂದೇ ದಾರಿ.
Related Articles
ಆದೀತು. ದೆಹಲಿಯಲ್ಲಿ ನಡೆದ ರೈತರ ಹೋರಾಟವನ್ನು ಬೆಂಬಲಿಸಿ ಮಾ. 5ರಂದು ಹಾವೇರಿಯಲ್ಲಿ ಜಿಲ್ಲಾಮಟ್ಟದ ಪ್ರತಿಭಟನೆ
ನಡೆಸಲಾಗುವುದು ಎಂದು ತಿಳಿಸಿದರು.
Advertisement
ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ರೈತ ಸಂಘದ ಮುಖಂಡರಾದ ಅಡಿವೆಪ್ಪ ಆಲದಕಟ್ಟಿ, ಮಹೇಶ ವಿರುಪಣ್ಣನವರ, ಮರಿಗೌಡ ಪಾಟೀಲ, ಮಲ್ಲೇಶಪ್ಪ ಪರಪ್ಪನವರ, ಸೋಮಣ್ಣ ಜಡೆಗೊಂಡರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ರಾಜೀವ್ ದಾನಪ್ಪನವರ, ಮಹಲಿಂಗಪ್ಪ ಅಕ್ಕಿವಳ್ಳಿ, ಶ್ರೀಧರ ಮಲಗುಂದ ಸೇರಿದಂತೆ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಎರಡು ಗಂಟೆಗಳಿಗೂ ಹೆಚ್ಚು ಕಾಲ ರೈತ ಮುಖಂಡರು ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ಕ್ರಮವನ್ನು ಖಂಡಿಸಿದರು. ಹಲವು ರೈತರು ವಿವಿಧ ಇಲಾಖೆಗಳಲ್ಲಿ ಎರಡೆರಡು ವರ್ಷಗಳಾದರೂ ತಮ್ಮ ಕೆಲಸಗಳು ಆಗದೇ ಇರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.