Advertisement

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು: ಸಿದ್ದರಾಮಯ್ಯ

12:51 PM Nov 19, 2021 | Team Udayavani |

ಬೆಂಗಳೂರು: ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ, ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು. ಇದುವೇ ರೈತರ ಸ್ವಾತಂತ್ರ್ಯೋತ್ಸವ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

Advertisement

ಮೂರು ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ನಿರ್ಧಾರವನ್ನು ಸ್ವಾಗತಿಸಿರುವ ಅವರು ಸರಣಿ ಟ್ವೀಟ್ ಮಾಡಿದ್ದು, ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ‌ ಅಭೂತಪೂರ್ವ ಹೋರಾಟಕ್ಕೆ‌ ಸಿಕ್ಕ ಗೆಲುವಾಗಿದೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಎಂದಿದ್ದಾರೆ.

ಇದನ್ನೂ ಓದಿ:ಲೋಕಸಭೆಯಲ್ಲಿ ಕೃಷಿ ಕಾಯ್ದೆ ರದ್ದುಗೊಂಡ ಬಳಿಕ ಪ್ರತಿಭಟನೆ ನಿಲ್ಲಿಸ್ತೇವೆ: ಟಿಕಾಯತ್

ಕೃಷಿ‌ಕಾಯ್ದೆಯನ್ನು ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ‌ ಪರಿಹಾರ ಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

ಕೃಷಿ ಕಾಯ್ದೆ‌ಯಷ್ಟೇ ಅಲ್ಲ, ಕೇಂದ್ರ ಬಿಜೆಪಿ ಸರ್ಕಾರದ ಪ್ರತಿಯೊಂದು ನೀತಿ ಮತ್ತು ಕಾರ್ಯಕ್ರಮಗಳು ರೈತ ವಿರೋಧಿಯಾದುದು. ಇದು ವಿರಮಿಸುವ ಕಾಲ ಅಲ್ಲ,‌ ರೈತ ವಿರೋಧಿ ಬಿಜೆಪಿ ವಿರುದ್ಧದ ಹೋರಾಟ ಮುಂದುವರಿಯಲಿದೆ. ರೈತರ ಹೋರಾಟಕ್ಕೆ ಸಿಕ್ಕ ಗೆಲುವಿನ‌‌ ಸ್ಪೂರ್ತಿ ಕೇಂದ್ರ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ವಿರುದ್ಧದ ಜನ ಹೋರಾಟಕ್ಕೆ ನಾಂದಿಯಾಗಲಿದೆ. ಪೆಟ್ರೋಲ್-ಡೀಸೆಲ್ ಸೇರಿದಂತೆ ಅಗತ್ಯವಸ್ತುಗಳ ಬೆಲೆ ಏರಿಕೆ ವಿರುದ್ಧದ ಹೋರಾಟಕ್ಕೆ ದೇಶದ ಜನ ಅಣಿಯಾಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next