Advertisement
ರಾಜ್‌ಪತ್ ನಲ್ಲಿ ನಡೆದ ಗಣರಾಜ್ಯೋತ್ಸವದ ಮೆರವಣಿಗೆ ಮುಕ್ತಾಯಗೊಂಡ ನಂತರ ದೆಹಲಿಯಲ್ಲಿ ತಮ್ಮ ಟ್ರ್ಯಾಕ್ಟರ್ ಪೆರೇಡ್ ನಡೆಸಲು ಅನುಮತಿ ನೀಡಲಾಗಿದೆ ಎಂದು ಭದ್ರತಾ ಸಿಬ್ಬಂದಿ ರೈತರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರೂ ಕೂಡ ರೈತರು ಕೇಳದೇ ಪೊಲೀಸ್ ಬ್ಯಾರಿಕೇಡ್‌ಗಳನ್ನು ಮುರಿದು ಹೊರ ರಿಂಗ್ ರೋಡ್ ನತ್ತ ಸಾಗಲು ಪ್ರಯತ್ನಿಸಿದರು” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Related Articles
Advertisement
ಕಿಸಾನ್ ಮಜ್ದೂರ್ ಸಂಘರ್ಷ ಸಮಿತಿಯು ಗಣರಾಜ್ಯೋತ್ಸವದಂದು ದೆಹಲಿಯ ಕಾರ್ಯನಿರತ ಹೊರ ರಿಂಗ್ ರೋಡ್ ನಲ್ಲಿ ತಮ್ಮ ಮೆರವಣಿಗೆಯನ್ನು ನಡೆಸುವುದಾಗಿ ಸೋಮವಾರ(ಜ.25) ಘೋಷಿಸಿತ್ತು. ಮಾತ್ರವಲ್ಲದೇ, ಫೆಬ್ರವರಿ 1 ರಂದು ವಾರ್ಷಿಕ ಬಜೆಟ್ ಮಂಡಿಸುವ ಸಂದರ್ಭದಲ್ಲಿ ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಪಡಿಸುವಂತೆ ಒತ್ತಾಯಿಸಲು ಸಂಸತ್ತಿಗೆ ಪಾದ ಯಾತ್ರೆಯನ್ನು ಕೂಡ ಮಾಡುತ್ತೇವೆ ಎಂದು ಘೋಷಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸಿಂಘು, ಟಿಕ್ರಿ ಮತ್ತು ಗಾಜಿಪುರ ಗಡಿ ಕೇಂದ್ರಗಳಿಂದ ದೆಹಲಿಗೆ ತೆರಳಲಿರುವ ‘ಕಿಸಾನ್ ಗಣತಂತ್ರ ಮೆರವಣಿಗೆ’ಯನ್ನು ಗಮನದಲ್ಲಿಟ್ಟುಕೊಂಡು ಭಾರಿ ಭದ್ರತೆಯನ್ನು ನಿಯೋಜಿಸಲಾಗಿದೆ.
ಓದಿ : ಕೇಂದ್ರದ ನೂತನ ಮೂರು ಕೃಷಿ ಕಾಯ್ದೆ ಮಹಾರಾಷ್ಟ್ರದಲ್ಲಿ ಜಾರಿಗೊಳಿಸಲ್ಲ: ಸ್ಪೀಕರ್ ಪಟೋಲೆ