Advertisement

ಬೆಳೆ ನಷ್ಟ ಪರಿಹಾರಕ್ಕೆ ರೈತರ ಒತ್ತಾಯ

02:27 PM Jan 01, 2020 | Suhan S |

ಬೆಳಗಾವಿ: ಕಾಕತಿ ಸಮೀಪದ ಖಾಸಗಿ ಕಂಪನಿಯಿಂದ ಹೊರ ಬರುತ್ತಿರುವ ತ್ಯಾಜ್ಯದಿಂದ ಸುತ್ತಲಿನ ಜಮೀನುಗಳ ಬೆಳೆ ನಾಶವಾಗುತ್ತಿದ್ದು, ಕೂಡಲೇ ಇದಕ್ಕೆ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿದ ರೈತರು, ಕಾರ್ಖಾನೆ ತ್ಯಾಜ್ಯದಿಂದ ಜಮೀನಿನ ಫಲವತ್ತತೆ ಕಡಿಮೆಯಾಗಿದೆ. ಇದರಿಂದ ಇಡೀ ಭೂಮಿಯೆಲ್ಲ ಬರಡು ಭೂಮಿಯಾಗಿದೆ. ಹೀಗಾಗಿ ಸಂಕಷ್ಟದಲ್ಲಿರುವ ರೈತರ ಸಮಸ್ಯೆಗೆ ಸ್ಪಂದಿಸಬೇಕು. ಎಕರೆಗೆ 50 ಸಾವಿರ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಈ ಭಾಗದ ರೈತ ಮುಖಂಡರೊಬ್ಬರನ್ನು ಕಾರ್ಖಾನೆಯ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳಬೇಕು. ಈ ಕುರಿತು ಅನೇಕ ಬಾರಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಡಳಿತ ಯಾವುದೇ ರೀತಿ ಕ್ರಮ ಕೈಗೊಂಡಿಲ್ಲ. ಬೆಳೆಹಾನಿ ಬಗ್ಗೆ ಸಮೀಕ್ಷೆ ನಡೆಸಬೇಕು. ರೈತರಿಗೆ ಬೆಳೆ ಪರಿಹಾರ ಜತೆಗೆ ಫಲವತ್ತತೆ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ರೈತರಾದ ಮಹೇಶ ದಂಡಗಿ, ಮೋಹನ ಕಂಗ್ರಾಳಕರ, ನಿಂಗಪ್ಪ ಕಂಗ್ರಾಳಕರ, ಶ್ರೀಕಾಂತ ಕಂಡೋಲಕರ, ಮಾರುತಿ ಕೋಳಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next