ವಿಧಾನಸಭೆ: ಇಂಧನ ಇಲಾಖೆಯನ್ನು ಖಾಸಗೀಕರಣ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ರೈತರ ಐಪಿ ಸೆಟ್‌ಗಳಿಗೆ ಮೀಟರ್ ಅಳವಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ಸದಸ್ಯ ಯಶವಂತರಾಯ್ ಗೌಡ ಪಾಟೀಲ್ ಕೇಳಿದ ಪ್ರಶ್ನೆಗೆ ಉತ್ತರಿಸಿ, ರೈತರ ಐಪಿ ಸೆಟ್‌ಗಳಿಗೆ ಮೀಟರ್ ಅಳವಡಿಸುವ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ. ಕೇಂದ್ರ ಸರ್ಕಾರದ ಐಡಿಎಸ್‌ಎಸ್ ಯೋಜನೆ ಅಡಿಯಲ್ಲಿ ರಾಜ್ಯಕ್ಕೆ ಅನುದಾನ ನೀಡಿದೆ.
ಆ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಪ್ರಿ ಪೇಯ್ಡ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಸರ್ಕಾರಿ ಕಚೇರಿಗಳ 5700 ಕೋಟಿ ರೂ. ವಿದ್ಯುತ್ ಬಿಲ್ ಬಾಕಿ ಇದೆ. ಹೀಗಾಗಿ ಸರ್ಕಾರಿ ಕಚೇರಿಗಳಲ್ಲಿ ಪ್ರಿ ಪೇಯ್ಡ್ ಯೋಜನೆ ಜಾರಿಗೆ ತರಲು ಚಿಂತನೆ ಮಾಡಲಾಗುತ್ತಿದೆ.
ಇದನ್ನೂ ಓದಿ:ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ
ತಾತ್ಕಾಲಿಕವಾಗಿ ವಿದ್ಯುತ್ ಪಡೆಯುವವರಿಗೂ ಪ್ರಿ ಪೇಯ್ಡ ಸೆಟ್ ಅಳವಡಿಸಲಾಗುತ್ತಿದೆ. ರಾಜ್ಯದಲ್ಲಿರುವ 27 ಅಮೃತ್ ಸಿಟಿಗಳಿಗೆ ಈ ಯೋಜನೆ ವಿಸ್ತರಿಸುವ ಬಗ್ಗೆ ಚಿಂತನೆ ನಡೆದಿದೆ. ಆದರೆ, ಯಾವುದೇ ಕಾರಣಕ್ಕೂ ಇಲಾಖೆಯ ಖಾಸಗೀಕರಣ ಮಾಡುವ ಪಸ್ತಾಪ ಸರ್ಕಾರದ ಮುಂದೆ ಎಂದು ಹೇಳಿದರು.