Advertisement

ರೈತರಿಗೆ ಕಿಸಾನ್ ‌ಕ್ರೆಡಿಟ್‌ಕಾರ್ಡ್‌ ತಲುಪಲಿ

05:55 PM Oct 18, 2020 | Suhan S |

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ರೈತರಿಗೆ ಶೇ.100 ರಷ್ಟು ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡಬೇಕು ಹಾಗೂ ಪ್ರತಿ 15 ದಿನಗಳಿಗೊಮ್ಮೆ ಯಾವ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ನಿಂದ ಯಾವ ರೀತಿ ರೈತರಿಗೆ ಉಪಯೋಗವಾಗುತ್ತಿದೆ ಎಂಬುದರ ಬಗ್ಗೆ ಸಮರ್ಪಕ ಮಾಹಿತಿ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಕುಮಾರ್‌ ಮೀನಾ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ,ಕಿಸಾನ್‌ಕ್ರೆಡಿಟ್‌ಕಾರ್ಡ್‌ ಸರಿಯಾದ ಸಮಯಕ್ಕೆ ರೈತರಿಗೆ ಸಿಕ್ಕಾಗ ಮಾತ್ರ ಬ್ಯಾಂಕ್‌ಗಳಲ್ಲಿ ಸಾಲ ಸಿಗಲು ಸಾಧ್ಯವಾಗುತ್ತದೆ. ಇದರಿಂದ ರೈತರು ಇನ್ನಷ್ಟು ಕೃಷಿ ಕಾರ್ಯಗಳನ್ನು ಮಾಡಲು ಸಹಕಾರಿಯಾಗುತ್ತದೆ. ಆದ್ದರಿಂದ ತ್ವರಿತಗತಿಯಲ್ಲಿ ಕಿಸಾನ್‌ ಕಾರ್ಡ್‌ ನೀಡಬೇಕೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಶೇ.70ರಷ್ಟು ಸಾಲ: ಇದುವರೆಗೆ 80 ಸಾವಿರ ಕಿಸಾನ್‌ ಕ್ರೆಡಿಟ್‌ ಕಾರ್ಡ್‌ಗಳಿಗೆ ಶೇ.70 ರಷ್ಟುಸಾಲ ವಿತರಿಸಲಾಗಿದೆ. ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಸಹಕಾರ ಆದೇಶದಂತೆ12 ಸಾವಿರ ಅರ್ಜಿ ಸ್ವೀಕರಿಸಲಾಗಿದ್ದು,2800 ಕಿಸಾನ್‌ ಕ್ರೆಡಿಟ್‌ ಕಾರ್ಡ್‌ ಸಾಲ ಮಂಜೂರು ಮಾಡಲಾಗಿದೆ ಎಂದು ಹೇಳಿದರು.

ವರದಿ ನಿರ್ವಹಣೆ: 2019-20ನೇ ಸಾಲಿನಲ್ಲಿ ರೈತರಿಗೆ ಬೆಳೆಯಲ್ಲಿ ಉಂಟಾದ ನಷ್ಟಕ್ಕೆ ಪರಿಹಾರವಾಗಿ ವಿಮೆಯನ್ನು ಆದಷ್ಟು ಬೇಗ ರೈತರಿಗೆ ನೀಡಿ, ಅವರಿಗೆ ಕೃಷಿ ಚಟುವಟಿಕೆಗಳಿಗೆ ನೈತಿಕ ಬೆಂಬಲ ನೀಡಬೇಕೆಂದರು. ರೈತರ ಅನುಕೂಲಕ್ಕಾಗಿ ಪ್ರತಿ 15 ದಿನಗಳಿಗೊಮ್ಮೆ ಯಾವ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂಬುದರ ಬಗ್ಗೆ ವರದಿಯ ನಿರ್ವಹಣೆ ಮಾಡಬೇಕೆಂದರು.

ವೈದ್ಯರು,ನರ್ಸ್‌ಗಳು.ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಸೇರಿದಂತೆ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ಪ್ರತಿ 15 ದಿನಗಳಿಗೊಮ್ಮೆ ಕೋವಿಡ್‌-19 ಪರೀಕ್ಷೆ ಮಾಡಿಸಿಕೊಳ್ಳುವುದರ ಮೂಲಕ ತಮ್ಮ ಆರೋಗ್ಯಕಾಪಾಡಿಕೊಳ್ಳಿ ಎಂದು ಹೇಳಿದರು. ಜಿಲ್ಲೆಯಲ್ಲಿ ರೈತರಿಗೆ ರಸಗೊಬ್ಬರಗಳ ಕೊರತೆ ಇಲ್ಲ ಮತ್ತು ಶೇ.90ಕ್ಕಿಂತ ಹೆಚ್ಚಿನ ಬಿತ್ತನೆ ಕಾರ್ಯಗಳು ಈಗಾಗಲೇ ಮುಗಿದಿದೆ ಎಂದು ಜಂಟಿ ಕೃಷಿ ನಿರ್ದೇಶಕರು ಮಾಹಿತಿ ನೀಡಿದರು.

Advertisement

ಸಭೆಯಲ್ಲಿ ಜಿಲ್ಲಾಧಿಕಾರಿ ಆರ್‌.ಲತಾ, ಜಿಪಂ ಸಿಇಒ ಪಿ.ಶಿವಶಂಕರ್‌, ಉಪ ವಿಭಾಗಾಧಿಕಾರಿ ರಘುನಂದನ್‌, ಜಿಪಂ ಉಪ ಕಾರ್ಯದರ್ಶಿ ನೋಮೇಶ್‌, ಜಿಪಂಯೋಜನಾ ನಿರ್ದೇಶಕ ಗಿರಿಜಾ ಶಂಕರ್‌,ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಬಸವರಾಜ್‌, ನಗರಾಭಿವೃದ್ಧಿ ಕೋಶದ ಜಿಲ್ಲಾ ಯೋಜನಾ ನಿರ್ದೇಶಕ ರೇಣುಕಾ, ಆಹಾರ ಇಲಾಖೆಯ ಉಪನಿರ್ದೇಶಕಿ ಸವಿತಾ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯದರ್ಶಿ ಮನೋಜ್‌ಕುಮಾರ್‌ ಮೀನಾಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಕೋವಿಡ್‌-19 ತುರ್ತು ಪರಿಸ್ಥಿಯಲ್ಲಿ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯ ಎಲ್ಲಾ ಸಿಬ್ಬಂದಿ ವರ್ಗದವರು ಉತ್ತಮ ಗುಣಮಟ್ಟದ ಮಾಸ್ಕ್ಗಳನ್ನು ಬಳಸಿ ಆರೋಗ್ಯಕಾಪಾಡಿಕೊಳ್ಳಬೇಕು.ಕಚೇರಿ ಸಿಬ್ಬಂದಿಗೆ ಏನಾದರೂ ಕೋವಿಡ್ ಲಕ್ಷಣಗಳುಕಂಡುಬಂದಲ್ಲಿ ಕೂಡಲೇ ಕೋವಿಡ್‌-19 ಪರೀಕ್ಷೆ ಮಾಡಿಸಿಕೊಂಡು ಗುಣಮುಖಆಗುವವರಿಗೂ ಮನೆಯಿಂದಲೇಕಾರ್ಯ ನಿರ್ವಹಿಸಿ. ಮನೋಜ್‌ ಕುಮಾರ್‌ ಮೀನಾ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ

Advertisement

Udayavani is now on Telegram. Click here to join our channel and stay updated with the latest news.

Next