Advertisement
ಪಟ್ಟಣದ ಡಿಸಿಸಿ ಬ್ಯಾಂಕ್ ಆವರಣದಲ್ಲಿ ತಾಲೂಕಿನ ದೊಡ್ಡಶಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವ್ಯಾಪ್ತಿಯಲ್ಲಿನ ಮಹಿಳಾ ಸ್ವಹಾಯ ಸಂಘಗಳಿಗೆ 3.07 ಕೋಟಿ ರೂ.ಸಾಲ ವಿತರಿಸಿ ಮಾತನಾಡಿದ ಅವರು, ಎರಡೂ ಜಿಲ್ಲೆಯ ರೈತರ ಜೀವಾಳವಾಗಿರುವ ಹೈನುಗಾರಿಕೆ ಮತ್ತಷ್ಟು ಉತ್ತಮ ಪಡಿಸಿ ರೈತರ ಬದುಕು ಹಸನಾಗಿಸುವ ಜೊತೆಗೆ ರೈತರ ಮಹಿಳೆಯರು ಸ್ವಾವಲಂಬಿಗಳಾಗಿ ಬದಕಲು ಹಾಲು ಒಕ್ಕೂಟ ಮತ್ತು ಡಿಸಿಸಿ ಭ್ಯಾಂಕ್ ಒಟ್ಟಿಗೆ ಕೆಲಸಮಾಡಬೇಕಾಗಿದೆ ಎಂದರು.
Related Articles
Advertisement
ಶಾಸಕ ಹಾಗೂ ಕೋಚಿಮಲ್‌ನ ಅಧ್ಯಕ್ಷ ಕೆ.ವೈ.ನಂಜೇಗೌಡ ಮಾತನಾಡಿ, ಮುಂದಿನ ದಿನಗಳಲ್ಲಿ ಕೋಚಿಮಲ್ ವ್ಯಾಪ್ತಿಯ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳು ಮತ್ತು ಮಹಿಳಾ ಸ್ವಸಹಾಯ ಸಂಘಗಳು ಡಿಸಿಸಿ ಬ್ಯಾಂಕಿನಲ್ಲಿ ಠೇವಣಿ ಇಡುವಂತಾಗಬೇಕಾಗಿದೆ. ಮಹಿಳೆಯರು ತಮ್ಮ ಉಳಿತಾಯ ಖಾತೆಗಳನ್ನು ಡಿಸಿಸಿ ಬ್ಯಾಂಕಿನಲ್ಲಿ ತೆರೆಯಬೇಕು. ತಾಲೂಕಿನ 160 ಹಾಲು ಉತ್ಪಾದಕರ ಸಹಕಾರ ಖಾತೆಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಖಾತೆಗಳನ್ನು ಡಿಸಿಸಿ ಬ್ಯಾಂಕಿನಲ್ಲಿ ಆರಂಭಿಸುವುದಾಗಿ ತಿಳಿಸಿದರು.
ಡಿಸಿಸಿ ಬ್ಯಾಂಕಿನ ನಿರ್ದೇಶಕ ಕೆ.ಎಚ್.ಚನ್ನರಾಯಪ್ಪ, ದೊಡ್ಡಶಿವಾರ ಕೃಷಿ ಪತ್ತಿನ ಸಹಕಾರಸಂಘದ ಅಧ್ಯಕ್ಷ ಗೋವರ್ದನ ರೆಡ್ಡಿ, ಶಿವಾರಪಟ್ಟಣದ ಗ್ರಾಪಂ ಅಧ್ಯಕ್ಷೆ ಪರ್ವೀನ್‌ತಾಜ್, ವೆಂಕಟಗಿರಿಯಪ್ಪ, ಗೋಪಿನಾಥ್, ಮುನಿನಾರಾಯಣಪ್ಪ, ವೆಂಕಟಪ್ಪ, ಕೃಷ್ಣಪ್ಪ, ಶ್ರೀನಿವಾಸ್, ಟಿಎಪಿಸಿಎಂಎಸ್‌ನ ಅಧ್ಯಕ್ಷ ಶ್ರೀನಿವಾಸ್, ಬೈಯಣ್ಣ, ಡಿಸಿಸಿ ಬ್ಯಾಂಕಿನ ಮೇಲ್ವಿಚಾರಕ ಕೃಷ್ಣಪ್ಪ, ಮುಖ್ಯ ಕಾರ್ಯನಿರ್ವಹಕಾ ಸುಧಾಕರ್, ತಿರುಮೇಗೌಡ ಮತ್ತಿತರರು ಇದ್ದರು.
ಗೃಹೋಪಯೋಗಿ ವಸ್ತುಗಳು ಸುಲಭ ಕಂತಲ್ಲಿ ನೇರ ಮಾರಾಟ: ಮಹಿಳೆಯರ ಅನುಕೂಲಕ್ಕಾಗಿ ಗೃಪಯೋಗಿ ವಸ್ತುಗಳನ್ನು ಡಿಸಿಸಿ ಬ್ಯಾಂಕ್ ಸಹಯೋಗದಲ್ಲಿಯೇ ಮಾರಾಟ ಮಾಡುವ ಯೋಜನೆ ರೂಪಿಸಲಾಗಿದೆ. ತಮಗೆ ಬೇಕಾಗಿರುವ ಯಾವುದೇ ವಸ್ತುವನ್ನು ಖರೀದಿ ಮಾಡಿದರೂ ಮಾರುಕಟ್ಟೆಯ ಬೆಲೆಗಿಂತ ಕಡಿಮೆ ದರದಲ್ಲಿ ನೀಡುವುದರ ಜೊತೆಗೆ ಖರೀದಿ ಮಾಡಿರುವ ವಸ್ತುವನ್ನು ತಮ್ಮ ಮನೆ ಬಾಗಿಲಿಗೆ ತಲುಪಿಸುವ ಕೆಲಸವಾಗಲಿದೆ.
ಖರೀದಿ ಮಾಡಿದ ವಸ್ತುವಿನ ಹಣವನ್ನು ಒಂದೇ ಬಾರಿ ಕಟ್ಟಬೇಕಾಗಿಲ್ಲ. ಸುಲಭ ಕಂತುಗಳಲ್ಲಿ ಬಡ್ಡಿರಹಿತವಾಗಿ ಪಾವತಿಸುವ ಯೋಜನೆಯ ರೂಪಿಸಲಾಗಿದೆ ಎಂದು ಬ್ಯಾಲಹಳ್ಳಿ ಗೋವಿಂದ ಗೌಡ ಹೇಳಿದರು. 10 ಗ್ರಾಂನವರೆಗೂ ಚಿನ್ನಾಭರಣವನ್ನು ಶೂನ್ಯ ಬಡ್ಡಿದರದಲ್ಲಿ ಸುಲಭ ಕಂತುಗಳಲ್ಲಿ ನೀಡಲಾಗುವುದು ಎಂದರು.