ಮೈಸೂರು/ಗುಂಡ್ಲುಪೇಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇದೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದಟಛಿ ವಾಗ್ಧಾಳಿ ನಡೆಸಿದರು. ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ರೈತರ ಬೆಲೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಹಾಗೂ ಸಾಲ ಮನ್ನಾ ಮಾಡಲು ಬಿಜೆಪಿ ಬದಟಛಿವಾಗಿದೆ ಎಂದು ತಿಳಿಸಿದರು. ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ,ರಾಜ್ಯ ಸರ್ಕಾರ ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ವಿನಾಕಾರಣ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಈ ರೀತಿ ಬಲಪ್ರಯೋಗ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.