ಮಾಹಿತಿಯುಳ್ಳ ಸಿಡಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ರೈತರ ಆತ್ಮಹತ್ಯೆ ನಡೆಯುತ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಅತಿವೃಷ್ಟಿ, ಅನಾವೃಷ್ಟಿಯ ಸಂದರ್ಭದಲ್ಲಿ ರೈತರಿಗೆ ನೆರವಾಗಲು ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ, ಕೇಂದ್ರ ಸರ್ಕಾರ ಬೆಳೆ ವಿಮೆ ಹೆಸರಿನಲ್ಲಿ ರೈತರ ಹಣವನ್ನೇ ಲೂಟಿ ಮಾಡುತ್ತಿದೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನಮ್ಮ ಬಳಿ ಇದೆ ಎಂದು ಹೇಳಿದರು.
Advertisement
ರಫೆಲ್ ಹಗರಣದಂತೆ ಬೆಳೆ ವಿಮೆ ಯೋಜನೆಯಲ್ಲೂ ಹಗರಣ ನಡೆದಿದೆ. 15 ಸಾವಿರ ಕೋಟಿ ರೂ. ಅಕ್ರಮ ನಡೆದಿರುವ ಶಂಕೆ ಇದೆ. ಅದಾನಿ ಮತ್ತು ಅಂಬಾನಿ ವಿಮೆ ಕಂಪನಿಗೆ ಲಾಭ ಮಾಡಿಕೊಡುವ ದೃಷ್ಟಿಯಿಂದ ಯೋಜನೆ ಜಾರಿಗೆ ತರಲಾಗಿದೆ. ರೈತರಿಂದ 2014-15ನೇ ಸಾಲಿನಲ್ಲಿ 20 ಸಾವಿರ ಕೋಟಿ ರೂ. ವಿಮೆ ಪ್ರೀಮಿಯಂ ಹಣ ಜಮಾ ಆಗಿತ್ತು. ಇದರಲ್ಲಿ ರೈತರಿಗೆ 5 ಸಾವಿರ ಕೋಟಿ ರೂ. ಮಾತ್ರ ಪರಿಹಾರ ಸಿಕ್ಕಿದೆ. ಉಳಿದ 15 ಸಾವಿರ ಕೋಟಿ ರೂ.ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದರು.