Advertisement
ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ಜಾತ್ರೆಯ ಅಂಗವಾಗಿ ನಡೆಯುತ್ತಿದ್ದ ಕೃಷಿ ಕೈಗಾರಿಕೆ ವಸ್ತು ಪ್ರದರ್ಶನ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಮಾತನಾಡಿ, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ನಿರಂತರವಾಗಿ ನಡೆದುಕೊಂಡು ಬರುತ್ತಿದೆ. ಪ್ರತಿ ವರ್ಷ ಲಕ್ಷಾಂತರ ಜನರು ಭಾಗವಹಿಸುತ್ತಿದ್ದಾರೆ. ಈ ವರ್ಷ 3 ಲಕ್ಷಕ್ಕೂ ಅಧಿಕ ಜನ ಭಾಗವಹಿಸಿದ್ದಾರೆ ಎಂದರು.
Related Articles
Advertisement
ಎಲ್ಲರಿಗೆ ಅನುಕೂಲವಾಗುವಂತೆ ವಸ್ತು ಪ್ರದರ್ಶನ ಮಾಡಲಾಗುತ್ತಿದೆ. ಈ ವಸ್ತು ಪ್ರದರ್ಶನ ಜನಮನ್ನಣೆ ಪಡೆಯಲು ಹಿರಿಯ ಶ್ರೀಗಳು ಕಾರಣರು. ಅವರ ಆಶೀರ್ವಾದದಿಂದ ಈ ಲಕ್ಷಾಂತರ ಜನ ಕೃಷಿ ವಸ್ತು ಪ್ರದರ್ಶನವನ್ನು ವೀಕ್ಷಿಸಿ, ಕೃಷಿಯಲ್ಲಿ ಬದಲಾವಣೆ ತರಲು ಮುಂದಾಗಿದ್ದಾರೆ ಎಂದು ಹೇಳಿದರು.
ಪ್ರಪಂಚದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸಾಧನೆ ಮಾಡಿ, ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುತ್ತಿರುವ ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ನಡೆದ ಕೃಷಿ ಕೈಗಾರಿಕೆ ವಸ್ತು ಪ್ರದರ್ಶನ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗಿದೆ ಎಂದು ನುಡಿದರು.
ಈ ಬಾರಿಯ ವಸ್ತು ಪ್ರದರ್ಶನವನ್ನು 3ಲಕ್ಷ ರೈತರು ವೀಕ್ಷಣೆ ಮಾಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಹೊಸ ಹೊಸ ಅನ್ವೇಷಣೆ ಬಗ್ಗೆ ಮಾಹಿತಿ ನೀಡುವ ಕೇಂದ್ರ ಈ ವಸ್ತುಪ್ರದರ್ಶನ ಇಲ್ಲಿ ಕಾಣುವ ಒಂದು ಚಿತ್ರ ಅಲ್ಲಿಯ ಮಹತ್ವ ನೀಡುತ್ತದೆ. ಒಂದು ಚಿತ್ರ ಕೃಷಿಕರ ಉತ್ತೇಜನಕ್ಕೆ ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ರಾಕೇಶ್‌ಕುಮಾರ್, ಗ್ರಾಮಾಭಿವೃದ್ಧಿ ಅಧಿಕಾರಿ ಆರ್.ಮಾಲಾ, ತಾಪಂ ಸದಸ್ಯೆ ಮಮತಾ, ಮೈದಾಳ ಗ್ರಾಪಂ ಅಧ್ಯಕ್ಷೆ ಜಲಜಾಕ್ಷಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭಾರಾಣಿ, ಜಿಪಂ ಉಪಕಾರ್ಯದರ್ಶಿ ಕೃಷ್ಣಪ್ಪ, ವಸ್ತು ಪ್ರದರ್ಶನ ಕಾರ್ಯದರ್ಶಿ ಕೆಂಬಾರೇಣುಕಯ್ಯ, ಕೆ.ಎಸ್. ಉಮಾಮಹೇಶ್, ಜಿ.ಕುಮಾರ ಸ್ವಾಮಿ, ಜಿ.ರುದ್ರೇಶಯ್ಯ ಸೇರಿದಂತೆ ಹಲವರು ಇದ್ದರು.
ಪ್ರಥಮ ಬಹುಮಾನ: ಕಳೆದ 15 ದಿನಗಳಿಂದ ಶ್ರೀಕ್ಷೇತ್ರ ಸಿದ್ಧಗಂಗಾ ಮಠದಲ್ಲಿ ನಡೆದ ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಕೃಷಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ತಾಂತ್ರಿಕ ಮಹಾ ವಿದ್ಯಾಲಯಕ್ಕೆ ಪ್ರಥಮ ಬಹುಮಾನ ಲಭಿಸಿದೆ. ಪ್ರಥಮ ಬಹುಮಾನವನ್ನು ಅರಣ್ಯ ಇಲಾಖೆ, ಜಲಾನಯನ, ಸಿದ್ಧಗಂಗಾ ವಿದ್ಯಾ ಸಂಸ್ಥೆ,
ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆ, ಪಶು ಆಸ್ಪತ್ರೆ, ಜಿಲ್ಲಾ ಕೈಗಾರಿಕಾ ಕೇಂದ್ರ ಬಹುಮಾನ ಪಡೆದರು. ದ್ವಿತೀಯ ಬಹುಮಾನವನ್ನು ಬೆಂಗಳೂರಿನ ಕೃಷಿ ಮಾರಾಟ ಮಹಾಮಂಡಳ, ಶಿಕ್ಷಣ ಇಲಾಖೆ, ಸಿದ್ಧಗಂಗಾ ಆಸ್ಪತ್ರೆ, ಮಹಿಳಾ ಇಲಾಖೆ, ಮದ್ಯಪಾನ ಸಂಯಮ ಮಂಡಳಿ ಸೇರಿದಂತೆ ಹಲವು ಇಲಾಖೆಗಳು ಪ್ರಶಸ್ತಿ ಪಡೆದವು.
ವಿಜ್ಞಾನ ತಂತ್ರಜ್ಞಾನ ಬೆಳವಣಿಗೆ ಆದಂತೆ ಕೃಷಿ ಕ್ಷೇತ್ರದಲ್ಲಿಯೂ ಬದಲಾವಣೆ ಆಗುತ್ತಿದೆ. ಕೃಷಿಗೆ ಹೆಚ್ಚು ಉತ್ತೇಜನ ನೀಡುವುದು ಅಗತ್ಯವಾಗಿದೆ. ಶ್ರೀಕ್ಷೇತ್ರದಲ್ಲಿ ಹಿರಿಯ ಶ್ರೀಗಳು ಕೃಷಿ ಬಗ್ಗೆ ಜನರಲ್ಲಿ ಅರಿವು ಮೂಡಿಸಲು ಕೃಷಿ ಕೈಗಾರಿಕಾ ವಸ್ತು ಪ್ರದರ್ಶನ ಆರಂಭಿಸಿರುವುದು ಉತ್ತಮ ಕಾರ್ಯಕ್ರಮ ಇದಾಗಿದ್ದು, ಕಳೆದ 15 ದಿನಗಳಿಂದ 3ಲಕ್ಷಕ್ಕೂ ಅಧಿಕ ಜನರು ವೀಕ್ಷಣೆ ಮಾಡಿದ್ದಾರೆ. ಎಲ್ಲ ರೀತಿಯ ಕೃಷಿ ತಂತ್ರಜ್ಞಾನ ಮತ್ತು ವಿವಿಧ ಇಲಾಖೆಗಳ ಮಾಹಿತಿಯನ್ನು ಈ ವಸ್ತು ಪ್ರದರ್ಶನದಲ್ಲಿ ನೀಡಲಾಗಿದೆ. ಇದೊಂದು ಉತ್ತಮವಾದ ರಾಜ್ಯ ಮಟ್ಟದ ವಸ್ತು ಪ್ರದರ್ಶನ.-ಡಾ.ಕೆ.ರಾಕೇಶ್ ಕುಮಾರ್, ಜಿಲ್ಲಾಧಿಕಾರಿ