Advertisement
ನಗರದ ಸಿಂಗ್ರಿನಂಜಪ್ಪ ವೃತ್ತದಲ್ಲಿ ರಾಜ್ಯ ರೈತ ಸಂಘ, ಹಸಿರು ಸೇನೆ, ಜನಸ್ಪಂದನ ಟ್ರಸ್ಟ್, ದಕ್ಷಿಣ ಒಳನಾಡು ನೀರಾವರಿ ಹೋರಾಟ ಸಮಿತಿ, ಬೆಲೆ ಕಾವಲು ಸಮಿತಿ, ರಾಷ್ಟ್ರೀಯ ಹೆದ್ದಾರಿ 206 ಹಾಗೂ ಎತ್ತಿನ ಹೋಳೆ ಯೋಜನಾ ಸಂತ್ರಸ್ತರು, ಸೌಹಾರ್ಧ ಸಂಘಟನೆಗಳು ಸೇರಿ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ, ಎತ್ತಿನಹೊಳೆ ಯೋಜನೆಯಡಿ ತಾಲೂಕಿನ ಕೆರೆಗಳಿಗೆ ನೀರು ಹಂಚಿಕೆಯಲ್ಲಾಗಿರುವ ಮೋಸ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ 206ನ್ನು ಸೋಮವಾರ ಬಂದ್ ಮಾಡಲಾಯಿತು.
Related Articles
Advertisement
ಪ್ರಗತಿಪರ ಚಿಂತಕ ಉಜ್ಜಜ್ಜಿ ರಾಜಣ್ಣ ಮಾತನಾಡಿ ದರು. ರಸ್ತೆ ತಡೆಗೆ ಕರ್ನಾಟಕ ಪ್ರಾಂತ್ಯ ರೈತ ಸಂಘ, ಸಿ.ಐ.ಟಿ.ಯು, ಜನಸ್ಪಂದನ ಟ್ರಸ್ಟ್, ಭೂಮಿ ಸಾಂಸ್ಕೃತಿಕ ವೇದಿಕೆ, ಮುಸ್ಲೀಂಜಮಾಯತ್, ರೈತ ಕೃಷಿ ಕಾರ್ಮಿಕ ಸಂಘ, ಬೌದ್ದ ಮಹಾಸಭಾ, ಸಾವಯವ ಕೃಷಿ ಪರಿವಾರ, ಜಾಗೃತಿ ಸೇವಾ ಸಂಸ್ಥೆ, ಜಯಕರ್ನಾಟಕ, ಕರ್ನಾಟಕ ರಕ್ಷಣಾ ವೇಧಿಕೆ, ನವಕರ್ನಾಟಕ ಶಕ್ತಿ ಸಂಘಟನೆ ಸೇರಿದಂತೆ ಇತರ ಸಂಘಟನೆಗಳು ಬೆಂಬಲ ಸೂಚಿಸಿದವು.
ನಗರ ಠಾಣೆಯ ಪೋಲಿಸರು 70ಕ್ಕೂ ಹೆಚ್ಚು ಮುಖಂಡರುಗಳನ್ನು ಬಂಧಿಸಿ ಮಾಹಿತಿ ಪಡೆದು ಬಳಿಕ ಬಿಡುಗಡೆಗೊಳಿಸಿದರು. ರೈತ ಸಂಘದ ಗೌರವಧ್ಯಕ್ಷ ತಡಸೂರು ನಂಜಪ್ಪ, ತಾಲೂಕು ಅಧ್ಯಕ್ಷ ಬಸ್ತೀಹಳ್ಳಿ ರಾಜಣ್ಣ, ಹಸಿರು ಸೇನೆ ತಾಲೂಕು ಅಧ್ಯಕ್ಷ ತಿಮ್ಮಲಾಪುರ ದೇವರಾಜು, ಕಸಬಾ ಹೋಬಳಿ ಅಧ್ಯಕ್ಷ ಬೇಲೂರನಹಳ್ಳಿ ಷಡಕ್ಷರಿ, ಆಲ್ಬೂರು ಗಂಗಾಧರ್, ಕನ್ನಡ ರಕ್ಷಣಾ ವೇಧಿಕೆ ಅಧ್ಯಕ್ಷ ವಿಜಯ್ ಕುಮಾರ್, ಕಿರಣ್, ನವೀನ್, ಮಧು, ಎಪಿಎಂಸಿ ನಿರ್ದೇಶಕ ಮಧುಸೂದನ್, ಶರತ್ ಕಲ್ಲೇಗೌಡನಪಾಳ್ಯ, ಹುಚ್ಚ ಗೊಂಡನಹಳ್ಳಿ ಲೋಕೇಶ್, ಜಯಕರ್ನಾಟಕ ಸಂಘಟನೆ ಅಧ್ಯಕ್ಷ ಬಿ.ಟಿ. ಕುಮಾರ್, ಮೂಡಲಪಾಯ ಯಕ್ಷಗಾನ ನಂಜುಂಡಪ್ಪ ಇತರರಿದ್ದರು.
ತುಮಕೂರು: ರೈತ ವಿರೋಧಿ ಭೂಸ್ವಾಧೀನ ತಿದ್ದುಪಡಿ ಕಾಯ್ದೆಯನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪ ಪಡೆಯಬೇಕು, ಸರ್ಕಾರಿ ಉಪಯೋಗಕ್ಕೆ ರೈತರ ಭೂಮಿ ಪಡೆಯುವಾಗ ಬಾಡಿಗೆ ರೂಪದಲ್ಲಿ ಪಡೆಯಲು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆಯ ಹಮ್ಮಿಕೊಂಡಿದ್ದ ಹೆದ್ದಾರಿ ತಡೆ ನಡೆಯಿತು. ಚಳವಳಿ ನಡೆಸಿದ ರೈತರನ್ನು ಪೊಲೀಸರು ಬಂಧಿಸಿ ದಾಗ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುತ್ತಾ ರೈತರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಬಲ ವ್ಯಕ್ತ: ರಾಜ್ಯ ಸರ್ಕಾರ 2013 ರಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಭೂಸ್ವಾಧೀನ ಕಾಯ್ದೆಗೆ ತಿದ್ದುಪಡಿ ತಂದು, ಸರ್ಕಾರದ ಯೋಜನೆಗಳಿಗೆ ಭೂಮಿ ಪಡೆ ಯುವಾಗ ರೈತರ ಅನುಮತಿ ಪಡೆಯುವುದು ಕಡ್ಡಾಯವಲ್ಲ ಎಂದು ಕಾನೂನು ರೂಪಿಸಿದೆ.
ಇದು ರೈತರಿಗೆ ಮರಣ ಶಾಸನವಾಗಿದ್ದು, ಕೂಡಲೇ ಈ ತಿದ್ದುಪಡಿ ಅಂಶವನ್ನು ಕೈಬಿಟ್ಟು ಈ ಹಿಂದಿನಂತೆ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ ತರಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹಮ್ಮಿ ಕೊಂಡಿದ್ದ ಹೆದ್ದಾರಿ ತಡೆಗೆ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ನಗರದ ಜಾಸ್‌ಟೋಲ್ ಬಳಿ ಸುಮಾರು 45 ನಿಮಿಷಗಳಿಗೂ ಹೆಚ್ಚು ಕಾಲ ರಸ್ತೆ ತಡೆದ ರೈತರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು. ಇಲ್ಲಿಯ ಜಾಸ್‌ಟೋಲ್ ಬಳಿ ಸಮಾವೇಶಗೊಂಡ ಜಿಲ್ಲೆಯ ವಿವಿಧೆಡೆ ಗಳಿಂದ ಆಗಮಿಸಿದ್ದ ಸಾವಿರಾರು ರೈತರು, ಹೆದ್ದಾರಿ ತಡೆದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಅಲ್ಲದೆ ಕೂಡಲೇ ರಾಜ್ಯ ಸರ್ಕಾರ ಭೂಸ್ವಾಧೀನ ಕಾಯ್ದೆಗೆ ತಂದಿರುವ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿದರು.
ಸಮ್ಮಿಶ್ರ ಸರ್ಕಾರಕ್ಕೆ ಎಚ್ಚರಿಕೆ: ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಆನಂದ ಪಟೇಲ್, ರಾಜ್ಯ ಸರ್ಕಾರ 2013ರಲ್ಲಿ ಕೇಂದ್ರ ಸರ್ಕಾರ ರೈತರ ಹಿತದೃಷ್ಟಿಯನ್ನಿಟ್ಟುಕೊಂಡು ಜಾರಿಗೆ ತಂದಿದ್ದ ಭೂ ಸ್ವಾಧೀನ ಕಾಯ್ದೆಗೆ, ಮಣ್ಣಿನ ಮಕ್ಕಳೆಂದು ಹೇಳುವ ಎಚ್.ಡಿ.ಕುಮಾರಸ್ವಾಮಿ ಉದ್ಯಮಿಗಳ ಪರವಾದ ನಿಲುವುಗಳನ್ನು ತಾಳಿ, ಹಲವು ಮಾರ್ಪಾ ಡುಗಳನ್ನು ಮಾಡಿದ್ದು, ಇದರಿಂದ ಸಣ್ಣ ಹಿಡುವಳಿ ದಾರರು ಇರುವ ಭೂಮಿ ಕಳೆದು ಕೊಂಡು ಬೀದಿ ಪಾಲಾಗುವ ಸ್ಥಿತಿ ಬಂದಿದೆ. ರೈತ ವಿರೋಧಿ ಧೋರಣೆ ಗಳನ್ನು ತಾಳಿ ಸಿದ್ದ ರಾಮಯ್ಯ ಸರ್ಕಾರ ಅನುಭವಿಸಿದ ಹಿನ್ನೆಡೆಯನ್ನೇ ಮುಂದಿನ ದಿನಗಳಲ್ಲಿ ಸಮ್ಮಿಶ್ರ ಸರ್ಕಾರವೂ ಇದೇ ಸ್ಥಿತಿ ಅನುಭವಿಸಲಿದೆ ಎಂದು ಎಚ್ಚರಿಕೆ ನೀಡಿದರು.
ನಿರಂತರ ಹೋರಾಟ: ರಾಜ್ಯ ಸರ್ಕಾರ ರೈತರ ಹೋರಾಟವನ್ನು ಪೊಲೀಸ್ ಬಲದ ಮೂಲಕ ಹತ್ತಿ ಕ್ಕುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಕ್ರಮ ವಲ್ಲ. ಈ ದೇಶಕ್ಕೆ ಅನ್ನ, ಹಾಲು ನೀಡುವ ರೈತರ ವಿರುದ್ಧ ಸರ್ಕಾರಗಳು, ಅಭಿವೃದ್ಧಿ ಹೆಸರಿನಲ್ಲಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡು ಬೀದಿಗೆ ತಳ್ಳುತ್ತಿದೆ. ವೈಜ್ಞಾನಿಕ ಪರಿಹಾರ ನೀಡದೆ ಇಡಿಗಂಟಿನ ರೂಪದಲ್ಲಿ ಬಿಡಿಗಾಸು ನೀಡಿ ಅಪಮಾನ ಮಾಡುತ್ತಿದೆ. ಈ ಕಾಯ್ದೆ ಹಿಂಪಡೆಯುವ ವರೆಗೂ ಹೋರಾಟ ನಿಲ್ಲದು ಎಂದು ಆನಂದ್ ಪಟೇಲ್ ತಿಳಿಸಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಪ್ರಧಾನ ಕಾರ್ಯದರ್ಶಿ ಕೆಂಕೆರೆ ಸತೀಶ್ ಮಾತನಾಡಿ, ರಾಜ್ಯ ಸರ್ಕಾರ ಭೂ ಮಾಲೀಕರು ಮತ್ತು ಉದ್ದಿಮೆದಾರರ ನಡುವಿನ ದಲ್ಲಾಳಿಯಂತೆ ಕೆಲಸ ಮಾಡುತ್ತಿದೆ.
ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿ ಕೊಂಡು ರಿಯಲ್ ಎಸ್ಟೇಟ್ ಉದ್ಯಮಿಗಳಿಗೆ ನೀಡಿ, ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದೆ. ಇದು ಖಂಡನೀಯ. ಇದರ ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಉಗ್ರ ಸ್ವರೂಪ ಪಡೆದು ಕೊಳ್ಳಲಿದೆ ಎಂದು ಎಚ್ಚರಿಸಿದರು.ಜಿಲ್ಲಾ ಕಾರ್ಯಾಧ್ಯಕ್ಷ ಧನಂಜಯ ಆರಾಧ್ಯ, ಕೊರಟಗೆರೆ ತಾಲೂಕ್ ಅಧ್ಯಕ್ಷ ಕೋಡಿಹಳ್ಳಿ ಸಿದ್ಧರಾಜು, ತುರುವೇಕೆರೆ ತಾಲೂಕು ಅಧ್ಯಕ್ಷ ಹಳೆಸಂಪಿಗೆ ಕೀರ್ತಿ, ಪ್ರಸನ್ನ, ಲಕ್ಕಣ್ಣ, ಬೆಟ್ಟೇಗೌಡ, ವೆಂಕಟೇಶ್ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.