Advertisement

R Ashok: ರೈತ, ಕನ್ನಡಪರ ಹೋರಾಟಕ್ಕೆ ಹುಬ್ಬಳ್ಳಿ ಗಲಭೆಯ ಹೋಲಿಕೆ ಸಲ್ಲ

11:48 PM Oct 14, 2024 | Team Udayavani |

ಬೆಂಗಳೂರು: ಮತಬ್ಯಾಂಕ್‌ ರಾಜಕಾರಣ ಹಾಗೂ ಹಗರಣಗಳನ್ನು ಮರೆಮಾಚುವುದಕ್ಕಾಗಿ ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹುಬ್ಬಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧದ ಅಭಿಯೋಜನೆ ರದ್ದುಪಡಿಸಲು ಹೊರಟಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.

Advertisement

ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್‌ ಸರಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ರೈತರ ವಿರುದ್ಧದ ಪ್ರಕರಣ ವಾಪಸ್‌ ಪಡೆಯಲು ಸಿ.ಟಿ. ರವಿ ಮನವಿ ಮಾಡಿದ್ದರೂ ಅದಕ್ಕೆ ಸರಕಾರ ಸ್ಪಂದಿಸಿಲ್ಲ ಎಂದು ದೂರಿದರು.

ಮುಡಾ, ವಾಲ್ಮೀಕಿ ನಿಗಮದ ಹಗರಣದಿಂದ ತಪ್ಪಿಸಿಕೊಳ್ಳಲು ಈ ತಂತ್ರ ಮಾಡಿರಬಹುದು. ಆದರೆ ಬಿಜೆಪಿಯಿಂದ ಈ ಎರಡೂ ಹಗರಣಗಳ ವಿರುದ್ಧ ಹೋರಾಟ ಮುಂದುವರಿಯಲಿದೆ ಎಂದರು.

ಈ ಸರಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಅಲ್ಪಸಂಖ್ಯಾಕರನ್ನು ಓಲೈಸುವುದಕ್ಕಾಗಿ ಪ್ರಕರಣ ವಾಪಸ್‌ ಪಡೆದಿದ್ದಾರೆ. ಎನ್‌ಐಎ ತನಿಖೆ ನಡೆಯುತ್ತಿರುವಾಗ ಹೇಗೆ ವಾಪಸ್‌ ಪಡೆಯಲು ಸಾಧ್ಯ ?
– ಛಲವಾದಿ ನಾರಾಯಣಸ್ವಾಮಿ, ವಿಧಾನ ಪರಿಷತ್‌ ವಿಪಕ್ಷ ನಾಯಕ

ಹುಬ್ಬಳ್ಳಿ ಗಲಭೆ, ಕಾನೂನು ಕೈಗೆ ತೆಗೆದುಕೊಂಡ ಘಟನೆ ಹಿನ್ನೆಲೆಯಲ್ಲಿ ದಾಖಲಾಗಿದ್ದ ಕೇಸನ್ನು ಹಿಂಪಡೆದುದು ಖಂಡನಾರ್ಹ. ಕಾನೂನನ್ನು ಗೌರವಿಸದ ಕಾಂಗ್ರೆಸ್‌ ಸರಕಾರ, ಎಡವಟ್ಟಿನ ಸರಕಾರ.
– ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಮಾಜಿ ಉಪಮುಖ್ಯಮಂತ್ರಿ

Advertisement

ಹುಬ್ಬಳ್ಳಿ ಪ್ರಕರಣ ವಾಪಸ್‌ ಪಡೆದ ಸಿದ್ದರಾಮಯ್ಯನವರು ದೇಶದ್ರೋಹಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದ್ದಾರೆ. ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು ಇದಕ್ಕೆ ಬೆಂಬಲವಾಗಿರುವುದು ಖಂಡನೀಯ.
– ಗೋವಿಂದ ಕಾರಜೋಳ, ಸಂಸದ

Advertisement

Udayavani is now on Telegram. Click here to join our channel and stay updated with the latest news.

Next