Advertisement

ರೈತರ ಸಮಸ್ಯೆಯೇ ಅಸ್ತ್ರ : ಕಾಂಗ್ರೆಸ್‌ ನಿರ್ಧಾರ

12:32 AM Dec 20, 2022 | Team Udayavani |

ಬೆಂಗಳೂರು: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಅಸ್ತ್ರವಾಗಿರಿಸಿಕೊಂಡು ವಿಧಾನ ಮಂಡಲದ ಉಭಯ ಸದನಗಳಲ್ಲಿ ಸರಕಾರದ ವಿರುದ್ಧ ಹೋರಾಡಲು ಕಾಂಗ್ರೆಸ್‌ ಶಾಸಕಾಂಗ ಪಕ್ಷ ತೀರ್ಮಾನಿಸಿದೆ. ಜತೆಗೆ ಸದನದಲ್ಲಿ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ.

Advertisement

ಬೆಳಗಾವಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ನೇತೃತ್ವದಲ್ಲಿ ಸೋಮವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 40 ಪರ್ಸೆಂಟ್‌ ಭ್ರಷ್ಟಾಚಾರ, ಬೆಳಗಾವಿ ಗಡಿ ವಿವಾದ, ವೋಟರ್‌ ಐಡಿ ಹಗರಣ, ಅಂತಾರಾಜ್ಯ ಗಡಿ ವಿವಾದ ಮತ್ತಿತರ ವಿಚಾರ ಗಳನ್ನು ಪ್ರಮುಖವಾಗಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದ ಕಬ್ಬು, ಅಡಿಕೆ, ತೊಗರಿ ಮತ್ತಿತರ ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳು, ಜಾನುವಾರುಗಳಿಗೆ ಅಂಟಿರುವ ಕಾಯಿಲೆ ಬಗ್ಗೆ ಸದನದಲ್ಲಿ ಪ್ರಸ್ತಾವಿಸಲಾಗುವುದು. ಸದಸ್ಯರೆಲ್ಲರೂ ಸದನದಲ್ಲಿ ಕಡ್ಡಾಯವಾಗಿ ಹಾಜರಿದ್ದು ಕಲಾಪದಲ್ಲಿ ಭಾಗವಹಿಸಬೇಕೆಂದು ಶಾಸಕರಿಗೆ ಸೂಚಿಸಿದರು. ಕಾಂಗ್ರೆಸ್‌ ಶಾಸಕರ ಕ್ಷೇತ್ರಗಳಿಗೆ ಅನುದಾನ ಬಿಡುಗಡೆಯಾಗದ ಬಗ್ಗೆ, ಸರಕಾರ ಬಡವರ ಮನೆಗಳ ನಿರ್ಮಾಣಕ್ಕೆ ಮುಂದಾಗದಿರುವ ಕುರಿತು ಸದಸ್ಯರು ಸಭೆಯ ಗಮನ ಸೆಳೆದರು.

ಇದೇ ವೇಳೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಲಿರುವ ಯಾತ್ರೆ ಕುರಿತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್‌ ಶಾಸಕರಿಗೆ ಮಾಹಿತಿ ನೀಡಿದರು. ಬೂತ್‌ ಮಟ್ಟದಲ್ಲಿ ಹಮ್ಮಿಕೊಳ್ಳಬೇಕಾದ ಕಾರ್ಯಕ್ರಮಗಳ ಬಗ್ಗೆ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುಜೇìವಾಲ ಸಲಹೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next