Advertisement

ಶ್ರೀರಂಗಪಟ್ಟಣ: ಡಿವೈಎಸ್ಪಿ ಕಚೇರಿಗೆ ರೈತರ ಮುತ್ತಿಗೆ

12:47 PM Aug 22, 2020 | Suhan S |

ಶ್ರೀರಂಗಪಟ್ಟಣ: ಕೆಆರ್‌ಎಸ್‌ ಜಲಾಶಯ ಬಳಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲು ತೆರಳುತ್ತಿದ್ದ ರೈತರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದು, ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಧರಣಿ ಕುಳಿತು ಪ್ರತಿಭಟನೆ ನಡೆಸಿದರು.

Advertisement

ಪಟ್ಟಣದ ಡಿವೈಎಸ್ಪಿ ಕಚೇರಿ ಎದುರು ಅರ್ಧ ತಾಸಿಗೂ ಹೆಚ್ಚು ಕಾಲ ಧರಣಿ ನಡೆಸಿ ಪೊಲೀಸರು, ಸರ್ಕಾರ ಮತ್ತು ಮುಖ್ಯಮಂತ್ರಿ ವಿರುದ್ಧ ಘೋಷಣೆ ಕೂಗಿದರು. ಕೆಆರ್‌ ಎಸ್‌ ಗೆ ತೆರಳುತ್ತಿದ್ದ ರೈತರನ್ನು ಪೇಪರ್‌ ಮಿಲ್‌ ವೃತ್ತದಲ್ಲಿ ತಡೆದು ದೌರ್ಜನ್ಯ ನಡೆಸಿದ್ದಾರೆ. ಮನವಿ ಪತ್ರ ಹರಿದು ರೈತ  ಚಳವಳಿಗೆ ಅವಮಾನ ಮಾಡಿದ್ದಾರೆಂದು ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು.

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್‌. ಕೆಂಪೂಗೌಡ, ಸಂಬಂಧಿಸಿ ದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಚಳವಳಿ ತೀವ್ರಗೊಳಿಸುತ್ತೇವೆಂದರು. ಈ ವೇಳೆ ಡಿವೈಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಿದರು. ಡಿವೈಎಸ್ಪಿ ಅರಣ್‌ ನಾಗೇಗೌಡಮಾತನಾಡಿ, ಪ್ರಕರಣ ಕುರಿತು ಎಸ್ಪಿ, ಐಜಿ ಅವರಿಗೆ ವರದಿ ಸಲ್ಲಿಸುತ್ತೇನೆಂದರು. ಮರಳಾಗಾಲ ಕೃಷ್ಣೇಗೌಡ, ಪಾಂಡು, ಬಿ. ಎಸ್‌.ರಮೇಶ್‌, ಕಡತ ನಾಳು ಬಾಲಕೃಷ್ಣ, ಲಿಂಗಪ್ಪಾಜಿ, ರಾಜೇ ಗೌಡ, ಕೆ.ಆರ್‌. ಜಯರಾಂ ಇದ್ದರು.

ಪ್ರತಿಭಟನಾಕಾರರನ್ನು ಬಂಧಿಸಿದ ಪೊಲೀಸರು :  ಕೆಆರ್‌ಎಸ್‌ ಸುತ್ತಮುತ್ತ 20 ಕಿ.ಮೀ.ವ್ಯಾಪ್ತಿಯಲ್ಲಿ ಕಲ್ಲು ಗಣಿಗಾರಿಕೆ  ನಿಷೇಧಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ರೈತಸಂಘ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳು ಮುಂದಾಗಿದ್ದವು. ಈ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ಯೇ ವಿವಿಧ ಸಂಘಟನೆಗಳ ಮುಖಂಡರನ್ನು ಮನೆ ಯಿಂದ ಹೊರಹೋಗದಂತೆ ದಿಗ್ಬಂಧನ ವಿಧಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next