ಮುಳಬಾಗಿಲು: ವಿಧಾನಸಭೆ ಅಧಿವೇಶನದಲ್ಲಿ ಅಂಗೀಕರಿಸಿರುವ ರೈತ ವಿರೋಧಿ ಎಪಿಎಂಸಿ ಭೂ ಸುಧಾರಣೆ ಹಾಗೂ ವಿದ್ಯುತ್ ಕಾಯಿದೆಗಳ ತಿದ್ದುಪಡಿ ಸುಗ್ರೀವಾಜ್ಞೆಯನ್ನು ರೈತರ ಒಳಿತಿಗಾಗಿ ಹಿಂಪಡೆಯಬೇಕೆಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಎನ್.ವಡ್ಡಹಳ್ಳಿ ಬಳಿ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡಮಾತನಾಡಿ,ನೂತನಭೂಸುಧಾರಣಾ ಕಾಯಿದೆಯು ರೈತ ವಿರೋಧಿಯಾಗಿದೆ. ದೇಶದ ಮೂಲೆ ಮೂಲೆಯಲ್ಲಿಯೂ ವಿಚಾರಗಳು ಕೇಳಿಬರುತ್ತಿವೆ, ಸರ್ಕಾರಗಳು ಯಾವುದೇ ಚರ್ಚೆ ನಡೆಸದೇ ಸುಗ್ರೀವಾಜ್ಞೆ ಮೂಲಕ ಏಕಾಏಕಿ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವುದನ್ನು ಗಮನಿಸಿದರೆ ಕಾರ್ಪೊರೇಟ್ ಕಂಪನಿಗಳ ಪರವಾಗಿದೆ. ಸದರೀ ನೀತಿಯಿಂದ ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆಯಾಗಲಿದೆ. ರೈತರ ಹೆಸರಿನಲ್ಲಿ ಬಂಡವಾಳ ಶಾಹಿಗಳಿಗೆ, ಕಾರ್ಮಿಕರ ನೆಪದಲ್ಲಿ ಕೈಗಾರಿಕೋದ್ಯಮಗಳಿಗೆ ಸರ್ಕಾರ ಪರೋಕ್ಷವಾಗಿ ಸಹಾಯ ಮಾಡುತ್ತಿರುವುದು ಮೇಲ್ನೋಟಕ್ಕೆಕಂಡು ಬಂದಿದೆ ಎಂದರು.
ಎಪಿಎಂಸಿ ಕಾಯಿದೆ ತಿದ್ದುಪಡಿಯಿಂದ ಬಹುರಾಷ್ಟ್ರೀಯ ಕಂಪನಿಗಳು ಮಾರುಕಟ್ಟೆಗೆ ಬರುವಂತಾಗುತ್ತದೆಂದು ಆರೋಪಿಸಿದ ಅವರು, ತಹಶೀಲ್ದಾರ್ ರಾಜಶೇಖರ್ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ತಾಲೂಕು ಅಧ್ಯಕ್ಷ ಫಾರೂಕ್‌ಪಾಷ, ಹಸಿರು ಸೇನೆ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್, ಕಿಶೋರ್, ಆನಂದ್ ರೆಡ್ಡಿ, ಮಂಗಸಂದ್ರ ತಿಮ್ಮಣ್ಣ, ವೆಂಕಟೇಶಪ್ಪ, ಈಕಂಬಳ್ಳಿ ಮಂಜುನಾಥ್, ನವೀನ್, ವಿಜಯಪಾಲ್, ಮೂರ್ತಿ, ಸುಪ್ರೀಂಚಲ, ಶಿವ, ಸುಧಾಕರ್, ನಾರಾಯಣ್, ವಿನೋದ್, ಅನಿಲ್, ರವಿ, ಅಣ್ಣಹಳ್ಳಿ ನಾಗರಾಜ್, ನಾಗೇಶ್, ಧರ್ಮ ಎಲ್ಲಾ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.