ಕೋಲಾರ: ಜಿಲ್ಲೆಯಲ್ಲಿನ ಜ್ವಲಂತ ಸಮಸ್ಯೆಗಳನ್ನು ಬಗೆ ಹರಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರೈತ ಸೇನೆ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಬಂಗಾರಪೇಟೆ ವೃತ್ತದಲ್ಲಿ ಜಮಾಯಿಸಿದ ಸೇನೆಯ ಕಾರ್ಯಕರ್ತರು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಜಿಲ್ಲಾಡಳಿತದ ಭನವದ ತನಕ ರ್ಯಾಲಿ ನಡೆಸಿ, ಧರಣಿ ಕುಳಿತು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಕೂಗಿದರು.
ಸೇನೆಯ ರಾಜ್ಯಘಟಕದ ಅಧ್ಯಕ್ಷ ಎಂ.ಆರ್. ನಾರಾಯಣಗೌಡ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಜನರಕೆಲಸಗಳು ಆಗುತ್ತಿಲ್ಲ. ಕೋವಿಡ್ ಹೆಸರಿನಲ್ಲಿ ಸರ್ಕಾರಗ ಳು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದರು. ಸರ್ಕಾರಿ ಜಮೀನುಗಳು ಭೂಗಳ್ಳರ ಪಾಲಾಗತ್ತಿದೆ, ಕಂದಾಯ ಇಲಾಖೆ ಅಧಿಕಾರಿಗಳು ಸರ್ಕಾರಿ ಜಮೀನುಗಳಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಡುತ್ತಿದ್ದಾರೆ. ಕೆರೆ, ರಾಜಕಾಲುವೆಗಳು ಕಣ್ಮರೆಯಾಗುತ್ತಿವೆ. ರಕ್ಷಣೆ ಮಾಡಬೇಕಾದ ಅಧಿಕಾರಿಗಳೇ ಭೂಮಿಯನ್ನು ಕಬಳಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್ ಗೌಡ ಮಾತನಾಡಿ, ವೃದ್ಧಾಪ್ಯ, ವಿಧವಾ ವೇತನ,ಅಂಗವಿಲಕರ ಮಾಸಾಶನ, ಸಂಧ್ಯಾ ಸುರಕ್ಷಾದಂತಹ ಯೋಜನೆಯಲ್ಲಿ ಬರುವ ಫಲಾನುಭವಿಗಳಿಗೆ 3 ತಿಂಗಳಿಗೊಮ್ಮೆ ಹಾಗೂ 6 ತಿಂಗಳಿಗೊಮ್ಮೆ ದಾಖಲೆಗಳು ಸರಿಯಿಲ್ಲ ಎಂಬ ನೆಪವೊಡ್ಡಿ ವೇತನ ನೀಡುತ್ತಿಲ್ಲ.ಈವ್ಯವಸ್ಥೆಯನ್ನುಸರಿಪಡಿಸಬೇಕು ಎಂದು ಆಗ್ರಹಿಸಿದರು.
ಸೇನೆಯ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ಸಿ.ವಿ. ಪ್ರಭಾಕರ್ ಗೌಡ ಮಾತನಾಡಿದರು. ಸೇನೆಯ ಜಿಲ್ಲಾ ಘಟಕದ ಗೌರವಾಧ್ಯಕ್ಷ ಕೆ.ಬಿ.ಮುನಿವೆಂಕಟಪ್ಪ, ಉಪಾಧ್ಯಕ್ಷ ಎಂ.ವಿ.ಶ್ರೀಧರ್, ಸಂಘಟನಾ ಕಾರ್ಯದರ್ಶಿ ಗಳಾದ ವೆಂಕಟಾಚಲಪತಿ, ಮಂಜುನಾಥ್, ಬಂಗಾರ ಪೇಟೆ ತಾಲೂಕುಅಧ್ಯಕ್ಷ ತೊರಗನದೊಡ್ಡಿಮಂಜುನಾಥ್,ಪದಾಧಿಕಾರಿಗಳಾದ ಇಜಾಜ್ ಪಾಷ, ಮಕ್ಸೂದ್ ಪಾಷ, ಆನಂದಗೌಡ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.