Advertisement

ಸರ್ಕಾರಕ್ಕಿಲ್ಲ ಜನಪರ ಕಾಳಜಿ: ತಿಪ್ಪೇಸ್ವಾಮಿ

02:36 PM Dec 04, 2020 | Suhan S |

ಹಿರಿಯೂರು: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತ ವಿರೋಧಿ ಕಾಯ್ದೆ ಖಂಡಿಸಿ  ದೆಹಲಿಯಲ್ಲಿ ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

Advertisement

ಹೆದ್ದಾರಿ ಸಂಚಾರಕ್ಕೆ ಅಡ್ಡಿ ಪಡಿಸಿದ್ದರಿಂದ ಪ್ರತಿಭಟನಾನಿರತ ರೈತರನ್ನು ಬಂಧಿ ಸಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದತಾಲೂಕು ರೈತ ಸಂಘದ ಅಧ್ಯಕ್ಷ ಕೆ.ಟಿ. ತಿಪ್ಪೇಸ್ವಾಮಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಜನಸಾಮಾನ್ಯರು ಹಾಗೂ ಬಗ್ಗೆ ರೈತರ ಬಗ್ಗೆ ಕಾಳಜಿ ಇಲ್ಲ. ಮಾರಕಕಾಯ್ದೆಗಳಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣೆಕಾಯ್ದೆ, ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ, ವಿದ್ಯುತ್‌ ಕ್ಷೇತ್ರದ ಖಾಸಗೀಕರಣಗೊಳಿಸುವ ಹುನ್ನಾರದಿಂದ ರೈತರ ಬದುಕು ಸರ್ವನಾಶವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರದ ಧೋರಣೆ ಮುಂದುವರಿದರೆ ದೇಶಾದ್ಯಂತ ರೈತರು ದಂಗೆ ಎದ್ದು ದೊಡ್ಡ ಹೋರಾಟ ಮಾಡುವಂತಹ ಸ್ಥಿತಿ ಎದುರಾಗಬಹುದು ಎಂದು ಎಚ್ಚರಿಸಿದರು.

ರೈತ ಮುಖಂಡ ಕಸವನಹಳ್ಳಿ ರಮೇಶ್‌ ಮಾತನಾಡಿ, ದೇಶದಲ್ಲಿ ಮೋದಿ ಆಡಳಿತ ಮಾಡುತ್ತಿಲ್ಲ.ಅಂಬಾನಿಯಂತಹ ಶ್ರೀಮಂತರು ಆಡಳಿತ ನಡೆಸುತ್ತಿದ್ದಾರೆ. ಚುನಾವಣೆ ಸಮಯದಲ್ಲಿರೈತರ ಆದಾಯವನ್ನು ದ್ವಿಗುಣ ಮಾಡುತ್ತೇವೆ,ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತೇವೆ,ಉದ್ಯೋಗ ಸೃಷ್ಟಿ ಮಾಡುತ್ತೇವೆ, ವಿದೇಶಲ್ಲಿನ ಕಪ್ಪುಹಣವನ್ನು ವಾಪಸ್‌ ತರುತ್ತೇವೆಂದು ಹೇಳಿ ಅಧಿಕಾರಕ್ಕೆ ಬಂದರು. ಅಧಿಕಾರ ಸಿಕ್ಕ ನಂತರ ಚುನಾವಣೆ ಸಮಯದಲ್ಲಿ ನೀಡಿದ ಭರವಸೆಗಳನ್ನು ಮರೆತು ವಚನ ಭ್ರಷ್ಟರಾದರು. ಮೋದಿ ಸರ್ಕಾರದಿಂದ ರೈತರ ಕತ್ತು ಹಿಸುಕುವ ಕೆಲಸ ಆಗುತ್ತಿದೆ ಎಂದು ದೂರಿದರು. ಪ್ರ

ತಿಭಟನೆಯಲ್ಲಿ ರೈತ ಮುಖಂಡರಾದ ಸಿದ್ದರಾಮಣ್ಣ, ಅರಳಿಕೆರೆ ತಿಪ್ಪೇಸ್ವಾಮಿ, ತಿಮ್ಮಾರೆಡ್ಡಿ, ಜೈರಾಂ, ಮಹಂತೇಶ್‌, ಶಿವಣ್ಣ, ವಿರೂಪಾಕ್ಷಪ್ಪ,ಮನೋಹರ, ಸಿದ್ದಪ್ಪ, ಶಶಿಕಲಾ, ತಿಮ್ಮಕ್ಕ ಮತ್ತಿತರರು ಭಾಗವಹಿಸಿದ್ದರು.

ರೈತ ಸಂಘದಿಂದ ರಸ್ತೆ ತಡೆ :

Advertisement

ಚಳ್ಳಕೆರೆ: ಕೇಂದ್ರ ಸರ್ಕಾರದ ರೈತ ವಿರೋಧಿ  ಧೋರಣೆ ವಿರೋಧಿಸಿ ನವದೆಹಲಿಯ ಹೊರವಲಯದಲ್ಲಿ ಕಳೆದ ಎಂಟುದಿನಗಳಿಂದ ಮುಷ್ಕರ ನಡೆಸುತ್ತಿರುವ ರೈತರಿಗೆ ಬೆಂಬಲ ಸೂಚಿಸಿ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ರೆಡ್ಡಿಹಳ್ಳಿ ವೀರಣ್ಣ ನೇತೃತ್ವದಲ್ಲಿ ನಗರದಲ್ಲಿ ರಸ್ತೆ ತಡೆ ನಡೆಸಲಾಯಿತು.

ಸುಮಾರು 100ಕ್ಕೂ ಹೆಚ್ಚು ರೈತರು ಕೇಂದ್ರ ಸರ್ಕಾರ ವಿರುದ್ಧ  ಧಿಕ್ಕಾರ ಗೂಗುತ್ತಾ ಚಳ್ಳಕೆರೆಯಮ್ಮ ದೇವಸ್ಥಾನದಿಂದ ನೆಹರೂ ಸರ್ಕಲ್‌ಗೆ ಆಗಮಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರೆಡ್ಡಿಹಳ್ಳಿ ವೀರಣ್ಣ, ದೇಶದ 130 ಕೋಟಿ ಜನರಿಗೆ

ಆಹಾರ ನೀಡುವ ರೈತರ ದಾರುಣ ಸ್ಥಿತಿಯ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ. ಮುಷ್ಕರ ನಿರತ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅಲ್ಲಿನ ರೈತರಿಗೆ ಬೆಂಬಲ ವ್ಯಕ್ತಪಡಿಸುವ ಸಲುವಾಗಿರಸ್ತೆ ತಡೆ ನಡೆಸುತ್ತಿರುವುದಾಗಿ ತಿಳಿಸಿದರು.ಪೊಲೀಸ್‌ ಇಲಾಖೆಯ ಅನುಮತಿ ಪಡೆದಯದೆ ರಸ್ತೆ ತಡೆ ನಡೆಸಿದ 20ಕ್ಕೂಹೆಚ್ಚು ರೈತರನ್ನು ಪೊಲೀಸರು ಬಂ ಸಿ ಬಿಡುಗಡೆ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next