Advertisement
ನಗರದ ಬೆಸ್ಕಾಂನ ಅಧೀಕ್ಷಕ ಇಂಜಿನಿಯರ್ ಕಚೇರಿ ಎದುರು ವಿದ್ಯುತ್ ಖಾಸಗೀಕರಣ ವಿರೋಧಿಸಿ ಹಾಗೂ ರೈತವಿರೋಧಿ ಕಾಯ್ದೆಗಳನ್ನುವಾಪಸ್ ಪಡೆಯಲು ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
Related Articles
Advertisement
ವಿದ್ಯುತ್ ಗುತ್ತಿಗೆದಾರರ ಸಂಘದ ಕೇಂದ್ರೀಯಸಮಿತಿ ಅಧ್ಯಕ್ಷ ಮಲ್ಲಯ್ಯ ಮಾತನಾಡಿ, ಬೆಸ್ಕಾಂನಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಂಬಗಳು ಮುರಿದು ಹೋಗಿವೆ. ಅವುಗಳನ್ನು ಬದಲಾಯಿಸುವ ಕೆಲಸವನ್ನು ಸಹ ಖಾಸಗಿಯವರಿಗೆ ನೀಡಲಾಗಿದೆ ಎಂದರು.
ಇದಕ್ಕೂ ಮೊದಲು ನಗರದ ಟೌನ್‌ಹಾಲ್ ವೃತ್ತದಿಂದ ಬಿ.ಎಚ್.ರಸ್ತೆ ಮೂಲಕ ಬೆಸ್ಕಾಂ ಕಚೇರಿಯವರೆಗೆ ಸಾವಿರಾರು ರೈತರು ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನೂಲೆನೂರುಶಂಕರಪ್ಪ, ರಾಜ್ಯ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ, ರಾಜ್ಯ ಕಾರ್ಯಾಧ್ಯಕ್ಷ ಜಿ.ಎಂ. ವೀರ ಸಂಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜಿ.ಸಿ.ಶಂಕರಪ್ಪ, ವಿಭಾಗೀಯ ಚೌಕೀಮಠ ,ಯುವ ಘಟಕದ ಅಧ್ಯಕ್ಷ ಚಿರತೆ ಚಿಕ್ಕಣ್ಣ, ರಾಜ್ಯ ಕಾರ್ಯದರ್ಶಿ ಗೋಪಾಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್, ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಉಪಾಧ್ಯಕ್ಷ ಜಗದೀಶ್, ಪ್ರಧಾನ ಕಾರ್ಯದರ್ಶಿ ದಾದಾಪೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.