Advertisement

ಬಡವರು, ರೈತರು ಉಸಿರಾಡಲು ಚಳವಳಿಯ ಅನಿವಾರ್ಯತೆ ಸೃಷ್ಟಿ

04:29 PM May 17, 2022 | Team Udayavani |

ತುಮಕೂರು: ಕಲ್ಯಾಣ ರಾಷ್ಟ್ರವಾಗಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿಬಂಡವಾಳಶಾಹಿ ರಾಷ್ಟ್ರವಾಗಿ ಬದಲಾಗುತ್ತಿದ್ದು, ಉಸಿರಾಡಲು ಚಳವಳಿ ನಡೆಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದುಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದ ಬೆಸ್ಕಾಂನ ಅಧೀಕ್ಷಕ ಇಂಜಿನಿಯರ್‌ ಕಚೇರಿ ಎದುರು ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಹಾಗೂ ರೈತವಿರೋಧಿ ಕಾಯ್ದೆಗಳನ್ನುವಾಪಸ್‌ ಪಡೆಯಲು ಒತ್ತಾಯಿಸಿ ಸೋಮವಾರ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೃಷಿಯ ಬದಲಾಗಿ ಕೈಗಾರಿಕೆಯನ್ನು ಆದ್ಯತಾ ವಲಯವಾಗಿ ಪರಿಗಣಿಸಿದ ಪರಿಣಾಮ ಮುಂದೊಂದು ದಿನ ಆಹಾರಕ್ಕಾಗಿ ದೇಶದ ಬಡವರು ಹಾಹಾಕಾರ ಪಡುವಂತಾಗಲಿದೆ ಎಂದು ಎಚ್ಚರಿಸಿದರು.

ಭ್ರಷ್ಟಾಚಾರ, ಸ್ವಜನಪಕ್ಷಪಾತ: ಚಳವಳಿ ಎಂಬುದು ಈ ದೇಶದ ಪ್ರತಿಯೊಬ್ಬ ಪ್ರಜೆಯಲ್ಲಿಯೂ ಇರಬಹುದಾದ ಸಾಮಾನ್ಯ ಅಂಶ. ಆದರೆ ದೇಶದಲ್ಲಿ ನಿರುದ್ಯೋಗ, ಬಡತನ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ಕೋಮುವಾದ ತಾಂಡವಾಡುತಿದ್ದರೂ, ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಧರ್ಮವನ್ನು ಬೀದಿಗೆ ತಂದು, ಹಿಜಾಬ್‌, ಹಲಾಲ್‌, ಆಜಾನ್‌ ಹೆಸರಿನಲ್ಲಿಯುವಕರನ್ನು ಎತ್ತಿಕಟ್ಟಿ, ಪ್ರತಿಭಟಿಸುವ ಮನಸ್ಥಿತಿಯೇ ಇಲ್ಲದಂತೆ ಮಾಡಲಾಗಿದೆ ಎಂದರು.

ಅನುದಾನ ಕೊರತೆ: ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷಎ.ಗೋವಿಂದರಾಜು ಮಾತನಾಡಿ, ಜಿಲ್ಲೆಯಹೇಮಾವತಿ, ಎತ್ತಿನಹೊಳೆ, ಭದ್ರಮೇಲ್ದಂಡೆಯೋಜನೆಗಳು ನನೆಗುದಿಗೆ ಬಿದ್ದಿವೆ. ಬಿಕ್ಕೆಗುಡ್ಡ, ಹಾಗಲವಾಡಿ ಕುಡಿಯುವ ನೀರಿನಯೋಜನೆಗಳು ಅನುದಾನದ ಕೊರತೆಯಿಂದಸ್ಥಗಿತಗೊಂಡಿವೆ. ಸಚಿವ ಜೆ.ಸಿ.ಮಾಧುಸ್ವಾಮಿಅವರು ಚಿಕ್ಕನಾಯನಹಳ್ಳಿಗೆ ಮಾತ್ರ ಮಂತ್ರಿಎಂಬಂತೆ ವರ್ತಿಸಿ, ಇಡೀ ಜಿಲ್ಲೆಯನ್ನು ಕಡೆಗಣಿಸಿ ದ್ದಾರೆ ಎಂದು ದೂರಿದರು.

Advertisement

ವಿದ್ಯುತ್‌ ಗುತ್ತಿಗೆದಾರರ ಸಂಘದ ಕೇಂದ್ರೀಯಸಮಿತಿ ಅಧ್ಯಕ್ಷ ಮಲ್ಲಯ್ಯ ಮಾತನಾಡಿ, ಬೆಸ್ಕಾಂನಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ ನೂರಕ್ಕೂ ಹೆಚ್ಚು ಕಂಬಗಳು ಮುರಿದು ಹೋಗಿವೆ. ಅವುಗಳನ್ನು ಬದಲಾಯಿಸುವ ಕೆಲಸವನ್ನು ಸಹ ಖಾಸಗಿಯವರಿಗೆ ನೀಡಲಾಗಿದೆ ಎಂದರು.

ಇದಕ್ಕೂ ಮೊದಲು ನಗರದ ಟೌನ್‌ಹಾಲ್‌ ವೃತ್ತದಿಂದ ಬಿ.ಎಚ್‌.ರಸ್ತೆ ಮೂಲಕ ಬೆಸ್ಕಾಂ ಕಚೇರಿಯವರೆಗೆ ಸಾವಿರಾರು ರೈತರು ಬೃಹತ್‌ ಪ್ರತಿಭಟನೆ ಮೆರವಣಿಗೆ ನಡೆಸಿದರು.

ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ನೂಲೆನೂರುಶಂಕರಪ್ಪ, ರಾಜ್ಯ ಕಾರ್ಯದರ್ಶಿ ರವಿಕಿರಣ್‌ ಪೂಣಚ್ಚ, ವಿಭಾಗೀಯ ಪ್ರಧಾನ ಕಾರ್ಯದರ್ಶಿ ಮಲ್ಲಯ್ಯ, ರಾಜ್ಯ ಕಾರ್ಯಾಧ್ಯಕ್ಷ ಜಿ.ಎಂ. ವೀರ ಸಂಗಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿಜಿ.ಸಿ.ಶಂಕರಪ್ಪ, ವಿಭಾಗೀಯ ಚೌಕೀಮಠ ,ಯುವ ಘಟಕದ ಅಧ್ಯಕ್ಷ ಚಿರತೆ ಚಿಕ್ಕಣ್ಣ, ರಾಜ್ಯ ಕಾರ್ಯದರ್ಶಿ ಗೋಪಾಲ್‌, ಜಿಲ್ಲಾ ಸಂಘಟನಾ ಕಾರ್ಯದರ್ಶಿ ರವೀಶ್‌, ಗುತ್ತಿಗೆದಾರರ ಸಂಘದ ಅಧ್ಯಕ್ಷ ಸಿದ್ದಲಿಂಗಸ್ವಾಮಿ, ಉಪಾಧ್ಯಕ್ಷ ಜಗದೀಶ್‌, ಪ್ರಧಾನ ಕಾರ್ಯದರ್ಶಿ ದಾದಾಪೀರ್‌ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next