Advertisement

ಕಾಯ್ದೆ ತಿದ್ದುಪಡಿಗೆ ರೈತರ ವಿರೋಧ

05:04 PM Sep 19, 2020 | Suhan S |

ಮದ್ದೂರು: ಭೂ ಸುಧಾರಣೆ, ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ವಿಧಾನಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಒತ್ತಾಯಿಸಿ, ರೈತ ಸಂಘಟನೆ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಪದಾಧಿಕಾರಿಗಳು ಶಾಸಕರ ಆಪ್ತಕಾರ್ಯದರ್ಶಿ ಯೋಗಾನಂದ ಅವರಿಗೆ ಮನವಿ ಸಲ್ಲಿಸಿದರು.

Advertisement

ಪಟ್ಟಣದ ಶಾಸಕರ ನಿವಾಸದ ಬಳಿ ಜಮಾಯಿಸಿದ ಎರಡು ಸಂಘಟನೆ ಕಾರ್ಯಕರ್ತರು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ರೈತ ವಿರೋಧಿಮೂರು ಕಾಯ್ದೆಗಳನ್ನು ಸರಕಾರ ಕೂಡಲೇ ಹಿಂಪಡೆಯುವಂತೆ ಒತ್ತಾಯಿಸಿದರು.

ದೇಶದ ಜನತೆ ಕೋವಿಡ್ ಸಂಕಷ್ಟದಲ್ಲಿ ನರಕಯಾತನೆ ಅನುಭವಿಸುತ್ತಿದ್ದರೂ, ರಾಜ್ಯ ಸರ್ಕಾರ ರೈತ ಸಂಕುಲವನ್ನೇ ನಾಶ ಮಾಡಲು ಮುಂದಾಗಿದೆ. ಸೆ.21ರಿಂದ ಆರಂಭವಾಗುವ ವಿಧಾನ ಸಭಾ ಅಧಿವೇಶನದಲ್ಲಿ ಅಂಗೀಕಾರಕ್ಕೆ ಮುಂದಾಗುತ್ತಿರುವುದಕ್ಕೆ ಸ್ಥಳೀಯ ಶಾಸಕ ಡಿ.ಸಿ. ತಮ್ಮಣ್ಣ ಸೇರಿದಂತೆ ಎಲ್ಲಾ ಕ್ಷೇತ್ರಗಳ ಶಾಸಕರು ವಿರೋಧ ವ್ಯಕ್ತಪಡಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿಕರ್ನಾಟಕಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್‌, ರೈತ ಸಂಘಟನೆ ತಾಲೂಕು ಅಧ್ಯಕ್ಷ ಸೀತಾರಾಂ, ಪದಾಧಿಕಾರಿಗಳಾದ ವರದರಾಜು, ಕೀಳಘಟ್ಟ ನಂಜುಂಡಯ್ಯ, ನಿಂಗಪ್ಪಾಜಿ, ಪುಟ್ಟ ಸ್ವಾಮಿ, ಜಿ.ಎಚ್‌.ವೀರಪ್ಪ, ಗೊಲ್ಲರ ದೊಡ್ಡಿ ಅಶೋಕ್‌, ಶಂಕರಯ್ಯ, ನಾಗ ರಾಜು, ಹನುಮೇಶ್‌ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next