ಬೆಳಗಾವಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮಿಸಿದ ಕಾರಣ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆ ವಿರೋಧಿಸಿ ರವಿವಾರ ನಗರದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿದ ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.
ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದ ರೈತ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಬೆಳಗಾವಿಗೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ: ಗಣ್ಯರ ಸ್ವಾಗತ
ಬೆಳಗಾವಿಗೆ ಕೇಂದ್ರ ಸಚಿವ ಅಮಿತ್ ಶಾ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ನೂತನ ಕೃಷಿ ತಿದ್ದುಪಡಿ ವಿರೋಧಿಸಿದರು. ಈ ವೇಳೆ ಪೊಲೀಸರು ಮತ್ತು ರೈತ ಹೋರಾಟಗಾರರ ಮಧ್ಯೆ ಮಾತಿನ ಚಕಮಕಿ ನಡೆಯಿತು.
ಇದನ್ನೂ ಓದಿ: ಅಮಿತ್ ಶಾ ಆಗಮನಕ್ಕೂ ಮುನ್ನ ಬೆಳಗಾವಿ ಬಿಜೆಪಿಯಲ್ಲಿ ಮೂಲ- ವಲಸಿಗ ವಿವಾದ