Advertisement
ರೈತರು ಬಾರಕೋಲ್ ಮೂಲಕ ಚಾಟಿ ಬೀಸಿ, ಒನಕೆ ಹಿಡಿದು ರಸ್ತೆ ಸಂಚಾರ ಬಂದ್ ಮಾಡಿ, ಮಾನವ ಸರಪಳಿ ನಿರ್ಮಿಸಿ, ವಾಹನ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಬೈಕ್ ಗಳಿಗೆ ಒನಕೆ ಪೆಟ್ಟು ನೀಡಿದ ರೈತ ಮಹಿಳೆಯರು. ಕಡಲೆ ಬೆಳೆ ಬಾಕಿ ಹಣ ನೀಡದಕ್ಕೆ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
Related Articles
Advertisement
ಈ ಪೈಕಿ 20 ಕೋಟಿ ರೂ. ಹಣವನ್ನು ಆರ್ಟಿಜಿಎಸ್ ಮೂಲಕ ಪಾವತಿಸಿದ್ದು, ಬಾಕಿ ಉಳಿದ 6.50 ಕೋಟಿ ರೂ. ಹಣವನ್ನು ಪಾವತಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಈ ಬಗ್ಗೆ ಕೇಳಿದರೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೆಲವರು 2023 ರ ಆಗಷ್ಟಗೆ ಇದು ಅಂತ್ಯಗೊಂಡಿದೆ ಎನ್ನುತ್ತಾರೆ. ಆದರೆ, 2024 ರ ಜನವರಿಯಲ್ಲಿ ಇವರು ಕಡಲೆ ಖರೀದಿಸಿದ್ದು ಹೇಗೆ? ಎಂಬುದು ತಿಳಿಯುತ್ತಿಲ್ಲ. ಕೂಡಲೇ ಕಡಲೆ ಬೆಳೆಗಾರರ ಸಮಸ್ಯೆ ಪರಿಹರಿಸಬೇಕು ಎಂದು ಆಗ್ರಹಿಸಿದರು.
ಕಡಲೆ ನೀಡಿದ ರೈತರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ ಪಾಟೀಲ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಸಚಿವ ಎಚ್.ಕೆ ಪಾಟೀಲ ಅವರನ್ನು ರೈತರು 2-3 ಬಾರಿ ಭೇಟಿಯಾದರೂ ಕೇವಲ ಹಾರಿಕೆ ಉತ್ತರವನ್ನು ನೀಡಿ, ಕಳುಹಿಸಿದ್ದಾರೆ. ರೈತರ ಸಮಸ್ಯೆ ಬಗೆಹರಿಸಲು ಇದುವರೆಗೂ ಯಾವುದೇ ಸಭೆ ಕರೆದಿಲ್ಲ ಎಂದು ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ