Advertisement

ಉತ್ತರ ಪ್ರದೇಶದಲ್ಲಿ ರೈತರ ಸಾವು: ಘಟನೆ ಖಂಡಿಸಿ ಪಾಂಡವಪುರದಲ್ಲಿ ರೈತ ಸಂಘದಿಂದ ಪ್ರತಿಭಟನೆ

02:51 PM Oct 04, 2021 | Team Udayavani |

ಪಾಂಡವಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಉತ್ತರಪ್ರದೇಶದ ಲಖಿಂಪುರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವ ಅಜಯ್ ಮಿಶ್ರಾ ಮತ್ತು ಅವರ ಬೆಂಗಾವಲು ಪಡೆಯ ಕಾರುಗಳು ಏಕಾಏಕಿ ನುಗ್ಗಿ ನಾಲ್ವರು ರೈತರ ಮೃತ್ಯುವಿಗೆ ಕಾರಣರಾಗಿರುವುದನ್ನು ಖಂಡಿಸಿ ರೈತಸಂಘ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಐದು ದೀಪದ ವೃತ್ತದ ಬಳಿ ಶ್ರೀರಂಗಪಟ್ಟಣ-ಜೇವರ್ಗಿ ಹೆದ್ದಾರಿ ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಈ ಘಟನೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಸಾವಿಗೆ ಕಾರಣರಾದ ಅಜಯ್ ಮಿಶ್ರಾ ರವರ ಮೇಲೆ ಕೊಲೆ ಮೊಕದ್ದಮೆಯನ್ನು ದಾಖಲಿಸಿ ಅವರನ್ನು ಬಂಧಿಸಬೇಕು. ಜತೆಗೆ  ಅಜಯ್ ಮಿಶ್ರಾ ಮತ್ತು ಉತ್ತರಪ್ರದೇಶದ ಗೃಹ ಮಂತ್ರಿಗಳ ರಾಜಿನಾಮೆಗೆ  ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತಸಂಘದ ತಾಲೂಕು ಅಧ್ಯಕ್ಷ ಚಿಕ್ಕಾಡೆ ಹರೀಶ್, ಪ್ರಧಾನ ಕಾರ್ಯದರ್ಶಿ ಕೆನ್ನಾಳು ವಿಜಯಕುಮಾರ್, ಜಿ.ಪಂ ಮಾಜಿ ಸದಸ್ಯ ಕೆ.ಟಿ.ಗೋವಿಂದೇಗೌಡ, ಮುಖಂಡರಾದ ಡಿ.ಕೆ.ಸ್ಚಾಮಿಗೌಡ, ಕ್ಯಾತನಹಳ್ಳಿ ವಿಶ್ವನಾಥ್, ಕೆ.ಕೆ.ಗೌಡೇಗೌಡ, ಯುವ ಮುಖಂಡರಾದ ಎಣ್ಣೆಹೊಳೆಕೊಪ್ಪಲು ಮಂಜುನಾಥ್, ವೈ.ಜಿ.ರಘು, ದಸಂಸ ಮುಖಂಡ ಡಿ.ಕೆ.ಅಂಕಯ್ಯ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next