Advertisement

ಬಗರ್‌ಹುಕುಂ ಅರ್ಜಿ ವಿಲೇಗೆ ಆಗ್ರಹಿಸಿ ರೈತರ ಪ್ರತಿಭಟನೆ

02:47 PM May 14, 2019 | Team Udayavani |

ದಾವಣಗೆರೆ/ಮಾಯಕೊಂಡ: ಬಗರ್‌ಹುಕುಂ ಸಾಗುವಳಿದಾರರು ನಮೂನೆ-57ರಡಿಯಲ್ಲಿ ಸಾಗುವಳಿಗಾಗಿ ಸಲ್ಲಿಸಿದ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಮತ್ತು ಆನಗೋಡು ಹೋಬಳಿಯ ಎಲ್ಲಾ ಗ್ರಾಮಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ತಾಲೂಕಿನ ಆನಗೋಡಿನಲ್ಲಿ ರೈತರು ಪ್ರತಿಭಟನೆ ನಡೆಸಿದರು.

Advertisement

ಸೋಮವಾರ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ)ದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಆನಗೋಡು ಗ್ರಾಮದ ಶ್ರೀ ರೇವಣಸಿದ್ದೇಶ್ವರ ದೇವಸ್ಥಾನದಿಂದ ಪ್ರತಿಭಟನೆ ನಡೆಸಿದ ರೈತರು, ನಾಡಕಚೇರಿಗೆ ತೆರಳಿ ಉಪತಹಶೀಲ್ದಾರ್‌ ಹಾಲೇಶಪ್ಪಗೆ ಮನವಿ ಸಲ್ಲಿಸಿದರು.

ಆನಗೋಡು ಹೋಬಳಿ ವ್ಯಾಪ್ತಿಗೆ ಹಲವಾರು ಗ್ರಾಮಗಳ ಜನರು ಸಂಬಂಧಪಟ್ಟ ಇಲಾಖೆಗೆ ಬಹು ಹಿಂದಿನಿಂದಲೂ ಸಾಗುವಳಿಗಾಗಿ ಹಲವಾರು ಬಾರಿ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಇದುವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ ನಮೂನೆ-57ರ ಅಡಿಯಲ್ಲಿ ಸಾಗುವಳಿ ಅರ್ಜಿ ಫಾರಂಗಳನ್ನು ಸಲ್ಲಿಸಿರುತ್ತೇವೆ. ಹಾಗಾಗಿ ಕೂಡಲೇ ಸರ್ಕಾರ ಸದರಿ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಗ್ರಹಿಸಿದರು.

ಬೇಸಿಗೆ ಕಾಲವಾಗಿರುವ ಈ ದಿನಗಳಲ್ಲಿ ಸರಿಯಾಗಿ ಮಳೆಯಾಗದೇ ಸಾಕಷ್ಟು ನೀರಿನ ಸಮಸ್ಯೆ ಉಂಟಾಗಿದೆ. ಗ್ರಾಮದ ಜನರಿಗೆ ಕುಡಿಯುವ ನೀರು ಸಿಗುತ್ತಿಲ್ಲ. ಇನ್ನೂ ಜಾನುವಾರುಗಳ ಸ್ಥಿತಿ ಶೋಚನಿಯವಾಗಿದೆ. ಹಾಗಾಗಿ ಅಧಿಕಾರಿಗಳು ಕೂಡಲೇ ಕ್ರಮಕೈಗೊಂಡು ನೀರಿನ ಸಮಸ್ಯೆ ನಿವಾರಿಸಬೇಕು ಎಂದು ಒತ್ತಾಯಿಸಿದರು.

ಸೇನೆಯ ಆನಗೋಡು ಹೋಬಳಿ ಅಧ್ಯಕ್ಷ ಎಂ.ಸಿ. ಕೃಷ್ಣಮೂರ್ತಿ, ರುದ್ರೇಶ್‌, ಗುಡಾಳು ರಾಜಪ್ಪ, ಮಹೇಶಪ್ಪ, ಜಂಪಣ್ಣ, ಹನುಮಂತಪ್ಪ, ಹನುಮಕ್ಕ, ವಿಜಯ್‌, ದಂಡೆಪ್ಪ, ಹುಲಿಕಟ್ಟೆ ಮಂಜಪ್ಪ, ಆಲೂರುಹಟ್ಟಿ ಪುಟ್ಟಾನಾಯ್ಕ, ನಾಗರಾಜ್‌ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Advertisement

ದಾವಣಗೆರೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆನಗೋಡು ನಾಡಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ (ಹುಚ್ಚವ್ವನಹಳ್ಳಿ ಮಂಜುನಾಥ್‌ ಬಣ) ಕಾರ್ಯಕರ್ತರು ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್‌ ಹಾಲೇಶಪ್ಪ ಅವರಿಗೆ ಮನವಿ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next